Advertisement

ಪುತ್ತೂರು: ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದವನ ಬಂಧನ; ಗಾಂಜಾ, ಕಾರು ವಶ

01:35 PM Mar 17, 2023 | Team Udayavani |

ಪುತ್ತೂರು: ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದವನ್ನು ಬಂಧಿಸಿ, ಆತನಲ್ಲಿದ್ದ ಗಾಂಜಾ ಹಾಗೂ ಕಾರನ್ನು ವಶಪಡಿಸಿಕೊಂಡ ಘಟನೆ ಮಾ. 16 ರಂದು ಒಳಮೊಗ್ರು ಗ್ರಾಮದ ಪರ್ಪುಂಜ ಎಂಬಲ್ಲಿ ನಡೆದಿದೆ.

Advertisement

ತಾಲೂಕಿನ ಪಾಣಾಜೆ ಗ್ರಾಮದ (ಬಲ್ನಾಡು ಗ್ರಾಮ) ನಿವಾಸಿ ಅಬೂಬಕ್ಕರ್ ಸಿದ್ದಿಕ್ (35) ಬಂಧಿತ ಆರೋಪಿ.

ಅಬೂಬಕ್ಕರ್ ಸಿದ್ದಿಕ್ ಎಂಬಾತ ಕಾರಿನಲ್ಲಿ ಅಕ್ರಮವಾಗಿ ಗ್ರಾಹಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದುದನ್ನು ಪತ್ತೆ ಹಚ್ಚಿದ ಪೊಲೀಸರು ಆತನಲ್ಲಿದ್ದ ಸುಮಾರು 27 ಸಾವಿರ ಮೌಲ್ಯದ 670 ಗ್ರಾಂ ಗಾಂಜಾ ಮತ್ತು ಸುಮಾರು 70 ಸಾವಿರ ಮೌಲ್ಯದ ಕಾರನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

ಪೊಲೀಸ್ ಅಧೀಕ್ಷಕ, ಹೆಚ್ಚುವರಿ ಪೊಲೀಸ್ ಅಧೀಕ್ಷಕರ ನಿರ್ದೇಶನದಲ್ಲಿ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಡಾ.ವೀರಯ್ಯ ಹಿರೇಮಠ್, ಪುತ್ತೂರು ಗ್ರಾಮಾಂತರ ಪೊಲೀಸ್ ನಿರೀಕ್ಷಕ  ಮಂಜುನಾಥ್ ಎಂ. ರವರ ಮಾರ್ಗದರ್ಶನದಲ್ಲಿ ಪುತ್ತೂರು ಗ್ರಾಮಾಂತರ ಠಾಣಾ ಪಿ.ಎಸ್.ಐ. ಶ್ರೀನಾಥ್ ರೆಡ್ಡಿ ಮತ್ತು ಸುಬ್ರಹ್ಮಣ್ಯ ಹಾಗೂ ಸಿಬ್ಬಂದಿಗಳಾದ ಎಎಸ್ಐ ಮುರುಗೇಶ್, ವರ್ಗೀಸ್‌, ದೇವರಾಜ್, ಅದ್ರಾಮ್, ಪ್ರವೀಣ್ ರೈ, ಹರೀಶ್, ಶಿವಾನಂದ, ಹರ್ಷಿತ್‌ ತಂಡ ಭಾಗವಹಿಸಿದ್ದಾರೆ. ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next