Advertisement

Puttur: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

08:38 PM Aug 20, 2024 | Team Udayavani |

ಪುತ್ತೂರು: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆಯ್ಯೂರಿನಲ್ಲಿ ಆ.20ರ ಮಂಗಳವಾರ ಸಂಭವಿಸಿದೆ.

Advertisement

ಕೆಯ್ಯೂರು ಉದ್ದೋಳೆ ನಿವಾಸಿ, ಬಜರಂಗಳ ದಳ ಕೆಯ್ಯೂರು ಘಟಕದ ಸುರಕ್ಷಾ ಪ್ರಮುಖ್ ಸಚಿನ್‌ (27 ) ಆತ್ಮಹತ್ಯೆ ಮಾಡಿಕೊಂಡ ಯುವಕ.

ಸಚಿನ್ ಬಿಸಿಎ ವಿದ್ಯಾಭ್ಯಾಸ ಪೂರ್ಣಗೊಳಿಸಿದ್ದು, ಉದ್ಯೋಗದ ಹುಡುಕಾಟದಲ್ಲಿದ್ದರು. ಕೆಯ್ಯೂರು ಗ್ರಾಮದ ಪಂಚಾಯತ್ ಸಮೀಪ ಗೇರು ಮರವೊಂದಕ್ಕೆ ಕೇಸರಿ ಶಾಲು ಬಿಗಿದು ನೇಣು ಹಾಕಿಕೊಂಡಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next