ಪುತ್ತೂರು: ಕುಡಿದ ಮತ್ತಿನಲ್ಲಿ ತಮ್ಮನನ್ನೇ ಅಣ್ಣ ಕೊಲೆಗೈದ ಘಟನೆ ಪುತ್ತೂರಿನ ಕೆಮ್ಮಿಂಜೆ ಗ್ರಾಮದ ಕಟ್ಟಡವೊಂದರಲ್ಲಿ ಡಿ.1 ರಂದು ರಾತ್ರಿ ನಡೆದಿದೆ.
ವೃತ್ತಿಯಲ್ಲಿ ಕಾರ್ಮಿಕರಾಗಿರುವ ಹಾವೇರಿ ಜಿಲ್ಲೆಯ ಹೊಸೂರು ನಿವಾಸಿ ನಿಂಗನ ಗೌಡ ಎಂಬವರು ತಮ್ಮ ಒಡಹುಟ್ಟಿದ ತಮ್ಮ ಮಾದೇವಪ್ಪನನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಪುತ್ತೂರಿನ ಕೆಮ್ಮಿಂಜೆಯಲ್ಲಿ ಕಾರ್ಮಿಕ ಕೆಲಸ ಮಾಡುತ್ತಿದ್ದ ಸಹೋದರರಿಬ್ಬರು ನಿನ್ನೆ ರಾತ್ರಿ ಕಂಠಪೂರ್ತಿ ಕುಡಿದು ಜಗಳ ನಡೆಸಿದ್ದು, ಈ ವೇಳೆ ನಿಂಗನ ಗೌಡನು, ಮಾದೇವಪ್ಪನ ಮೇಲೆ ಹಲ್ಲೆ ಮಾಡಿದ್ದು, ಗಂಭೀರ ಗಾಯಗೊಂಡ ಆತ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.
ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಬಳಿಕ ಆರೋಪಿ ನಿಂಗನ ಗೌಡ ಪರಾರಿಯಾಗಿದ್ದು, ಆರೋಪಿಯ ಪತ್ತೆಗೆ ಸಹಕರಿಸುವಂತೆ ಪೊಲೀಸರು ತಿಳಿಸಿದ್ದಾರೆ.