ಪುತ್ತೂರು: ಹದಿನೈದು ವರ್ಷಗಳ ಹಿಂದಿನ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ನರಿಂಗಾನ ನಿವಾಸಿ ಮೊಹಮ್ಮದ್ ಬಶೀರ್‌ನನ್ನು ಪೊಲೀಸರು ಬಂಧಿಸಿದ್ದಾರೆ.
Advertisement
2009ರಲ್ಲಿ ಗಾಂಜಾ ಪ್ರಕರಣದಲ್ಲಿ ಬಂಧಿತನಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಬಶೀರ್ 5 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆರೋಪಿ ವಿರುದ್ಧ ವಾರಂಟ್ ಜಾರಿಯಾಗಿತ್ತು. ಪುತ್ತೂರು ನಗರ ಪೊಲೀಸ್ ಇನ್‌ಸ್ಪೆಕ್ಟರ್ ಮಾರ್ಗದರ್ಶನದಂತೆ ಆರೋಪಿಯನ್ನು ಪುತ್ತೂರಿನಲ್ಲಿ ಬಂಧಿಸಲಾಗಿದೆ.