ಪುತ್ತೂರು: ಕೌಕ್ರಾಡಿಯ ದಡ್ಡಲ್‌ಪಲ್ಕೆಯಲ್ಲಿ ನಡೆದ ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ 5 ವರ್ಷಗಳಿಂದ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಸಂಚಾರ ಪೊಲೀಸರು ಬಂಧಿಸಿದ್ದಾರೆ.
ಕುಣಿಗಲ್ ನಿವಾಸಿ ಮೂರ್ತಿ ಬಂಧಿತ ಆರೋಪಿ. 2014ರ ಮೇ 30ರಂದು ಕೌಕ್ರಾಡಿ ದಡ್ಡಲ್‌ಪಲ್ಕೆಯಲ್ಲಿ ನಡೆದ ಬಸ್ ಮತ್ತು ಆಟೋ ರಿಕ್ಷಾ ಅಪಘಾತಕ್ಕೆ ಸಂಬಂಧಿಸಿ ಬಸ್ ಚಾಲಕರಾಗಿದ್ದ ಮೂರ್ತಿ ವಿರುದ್ಧ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿ ಕಳೆದೈದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ ನ್ಯಾಯಾಲಯ ವಾರಂಟ್ ಜಾರಿ ಮಾಡಿತ್ತು. ಪುತ್ತೂರು ಸಂಚಾರ ಪೊಲೀಸರು ಆರೋಪಿಯನ್ನು ಬೆಂಗಳೂರಿನ ಹೊಸಕೋಟೆಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.