Advertisement
ಹೂ-ಹಣ್ಣು, ತರಕಾರಿ, ಹಣತೆ, ಗೂಡುದೀಪ, ಪಟಾಕಿ ಸಹಿತ ಹಬ್ಬಕ್ಕೆ ಬೇಕಾದ ಸಾಮಗ್ರಿ ಖರೀದಿಯಲ್ಲಿ ಗ್ರಾಹಕರು ಉತ್ಸಾಹ ತೋರಿದ್ದಾರೆ. ಆಭರಣ ಮಳಿಗೆ, ಎಲೆಕ್ಟ್ರಾನಿಕ್, ಗೃಹಪಯೋಗಿ ಮಳಿಗೆಗಳಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ರಿಯಾಯಿತಿ ದರ ಪ್ರಕಟಿಸಲಾಗಿದ್ದು ಹೀಗಾಗಿ ಖರೀದಿಗೆ ಗ್ರಾಹಕರು ಆಸಕ್ತಿ ತೋರುತ್ತಿರುವ ದೃಶ್ಯ ಕಂಡಿದೆ. ಕಳೆದ ಎರಡು ದಿನಗಳಿಂದ ಸಂಜೆ ಹೊತ್ತು ಮಾರುಕಟ್ಟೆಗಳಲ್ಲಿ ಜನಸಂದಣಿ ಹೆಚ್ಚಾಗಿದೆ.
Related Articles
Advertisement
ನಕ್ಷತ್ರ ಮಾದರಿ, ಕಂದಿಲು ಆಕಾರದ ಆಕಾಶ ಬುಟ್ಟಿಗಳು, ಚಂದ್ರನ ಆಕಾರದ ಆಕಾಶ ಬುಟ್ಟಿಗಳು ಗ್ರಾಹಕರನ್ನು ಆಕರ್ಷಿಸುತ್ತಿದೆ. ಅಲ್ಲಲ್ಲಿ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಲಾಗಿದ್ದು ನಾನಾ ಬಗೆಯ ಪಟಾಕಿಗಳನ್ನು ಮಾರಾಟ ಮಾಡಲಾಗುತ್ತಿದೆ. ಇಲ್ಲೂ ಗ್ರಾಹಕರನ್ನು ಸೆಳೆಯಲೆಂದು ಇರುವ ಆಫರ್‌ಗಳು ಗಮನ ಸೆಳೆಯುತ್ತಿದೆ.
ಬೆಳ್ತಂಗಡಿ ತಾಲೂಕಿನಲ್ಲಿ ಸಂಭ್ರಮ ಕಳೆಗಟ್ಟಿದೆ. ಅ.31ರಂದು ಹೆಚ್ಚಿನ ಕಡೆಗಳಲ್ಲಿ ಅಂಗಡಿ ಮುಂಗಟ್ಟು ವ್ಯಾಪಾರ ವ್ಯವಹಾರಗಳಲ್ಲಿ ಲಕ್ಷ್ಮೀ ಪೂಜೆ ಆಚರಿಸಲಾಗುತ್ತಿದೆ. ದೀಪಾವಳಿ ಪಟಾಕಿ ಸುರಕ್ಷತೆ ದೃಷ್ಟಿಯಿಂದ ತಾಲೂಕು ಆಡಳಿತವು ಪಟಾಕಿ ಮಾರಾಟ ಮಳಿಗೆಗಳನ್ನು ನಗರದಿಂದ ಹೊರ ಪ್ರದೇಶದಲ್ಲಿ ಅಳವಡಿಸುವ ಉದ್ದೇಶದಿಂದ ತಾಲೂಕು ಕ್ರೀಡಾಂಗಣದಲ್ಲಿ ಸ್ಟಾಲ್‌ಗಳಿಗೆ ವ್ಯವಸ್ಥೆ ಕಲ್ಪಿಸಿದೆ. ಸುಳ್ಯ, ಕಡಬ, ಬಂಟ್ವಾಳ ತಾಲೂಕಿನಲ್ಲೂ ಹಬ್ಬದ ಸಂಭ್ರಮ ಮನೆಮಾಡಿದೆ.
ದೀಪಾವಳಿ ಬೆಳಕಿನ ಹಬ್ಬವಾದರೂ ಪ್ರತೀ ವರ್ಷ ಹಲವರ ಬದುಕಲ್ಲಿ ಕತ್ತಲನ್ನು ಸಹ ಆವರಿಸುತ್ತದೆ. ದೀಪಾವಳಿ ಸಂದರ್ಭ ಪಟಾಕಿ ಸಿಡಿತದಿಂದ ಕಣ್ಣಿನ ಸಮಸ್ಯೆಯ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತವೆ. ಸಿಡಿಯುವ ಪಟಾಕಿಯಿಂದ ಸಣ್ಣ ಮಕ್ಕಳು ಗಾಯಗೊಳ್ಳುವುದು ಸೇರಿದಂತೆ ಹಲವು ದುರ್ಘಟನೆಗಳು ಸಂಭವಿಸುತ್ತವೆ. ಪಟಾಕಿ ಸಿಡಿಸುವಾಗ ಕನ್ನಡ ಧರಿಸುವುದು ಒಳ್ಳೆಯದು. ಪಟಾಕಿ ಸಿಡಿಸದೆ ಹಬ್ಬ ಆಚರಿಸಿ ಎನ್ನುವುದು ಸಾಧ್ಯವಾಗದ ಮಾತು. ಹಸುರು ಪಟಾಕಿ ಕೂಡ ಸಿಡಿಯುವಂತದ್ದೆ. ಪಟಾಕಿ ಸಿಡಿಸುವಾಗ ಕೈಯಲ್ಲಿ ಹಿಡಿದು ಮೇಲಿನ ಪೇಪರ್ ಸುಲಿದು ಬೆಂಕಿ ಹಚ್ಚುವ ಪ್ರಯತ್ನ ಬೇಡ. ಪಟಾಕಿ ಹಚ್ಚುವಾಗ ಕಿವಿಗೆ ಹತ್ತಿ ಹಾಗೂ ಮುಖಕ್ಕೆ ಮಾಸ್ಕ್ ಹಾಕಿಕೊಳ್ಳಿ, ಭಾರೀ ಸದ್ದು ಮಾಡುವ ಪಟಾಕಿಗಳಿಂದ ದೂರ ಸರಿಯಿರಿ. ಇಲ್ಲವಾದಲ್ಲಿ ಕಿವಿಯ ತಮಟೆಗೆ ಹಾನಿಯಾಗುವ ಸಾಧ್ಯತೆ ಹೆಚ್ಚು. ಮನೆಮನೆಗಳಲ್ಲಿ ಸಂಭ್ರಮ
ಗ್ರಾಮೀಣ, ನಗರ ಭಾಗದಲ್ಲಿ ಹಬ್ಬದ ಸಂಭ್ರಮ ಹೆಚ್ಚಿದೆ. ಬುಧವಾರ ಸಂಜೆ ಹಂಡೆಗೆ ನೀರು ತುಂಬಿಸುವ ಶಾಸ್ತ್ರ ನಡೆದು ಮರುದಿನ ಬೆಳಗ್ಗಿನ ತೈಲಾಭ್ಯಂಗಕ್ಕೆ ಮನೆಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮುಂದಿನ ಮೂರು ದಿನಗಳಲ್ಲಿ ದೀಪೋತ್ಸವ, ವಿಶೇಷ ಪೂಜೆಗಳು, ಬಲಿಪಾಡ್ಯಮಿ, ಗೋಪೂಜೆ, ಅಂಗಡಿಪೂಜೆ, ಲಕ್ಷ್ಮೀ ಪೂಜೆ ಇತ್ಯಾದಿಗಳು ಮನೆ ಹಾಗೂ ದೇವಸ್ಥಾನಗಳಲ್ಲಿ ನಡೆಯಲಿದೆ.