Advertisement

ಪುತ್ತೂರು: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

12:12 PM Nov 26, 2022 | Team Udayavani |

ಪುತ್ತೂರು: ಮಹಿಳೆಯೋರ್ವರ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಇಂದು (ನ.26) ತಾಲೂಕಿನ ಕುಂಬ್ರ ಎಂಬಲ್ಲಿ ನಡೆದಿದೆ.

Advertisement

ಸುಟ್ಟು ಕರಕಲಾದ ಸ್ಥಿತಿಯಲ್ಲಿದ್ದ ಮಹಿಳೆ ನಬೀಸ ಎಂದು ಗುರುತಿಸಲಾಗಿದೆ.  ಈಕೆ ನ.25 ರಂದು ರಾತ್ರಿ ಮನೆಯಲ್ಲಿ ಊಟ ಮುಗಿಸಿ ಮಲಗಿದ್ದು, ಬೆಳಿಗ್ಗೆ ಮನೆಯ ಎದುರು ಭಾಗದಲ್ಲಿ ಇವರು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ನಬೀಸ ಅವರೇ ಬೆಂಕಿ ಹಚ್ಚಿಕೊಂಡರೇ ಅಥವಾ ಆಕಸ್ಮಿಕವಾಗಿ ಬೆಂಕಿ ತಗುಲಿತ್ತೇ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ನಬೀಸ ಅವರು ಅಲ್ಪ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಸಂಪ್ಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಮೃತರು ಪತಿ ಇಬ್ರಾಹಿಂ ಹಾಗೂ ಮಕ್ಕಳನ್ನು ಅಗಲಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next