Advertisement

Puttur: ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಆರೋಪಿ ವಶಕ್ಕೆ

11:54 PM Dec 01, 2024 | Team Udayavani |

ಪುತ್ತೂರು: ನಗರಸಭೆ ಅಧ್ಯಕ್ಷೆ ಸಹಿತ ಆಡಳಿತವನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ನಿಂದಿಸಿ ಸಂದೇಶ ಹರಿಯ ಬಿಟ್ಟಿದ್ದಾರೆ ಎನ್ನಲಾದ ಪ್ರಕರಣದ ಆರೋಪಿಯನ್ನು ನಗರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement

ಪಡೀಲು ನಿವಾಸಿ, ಕಾಂಗ್ರೆಸ್‌ ಮುಖಂಡ ಎಂದು ಹೇಳಿಕೊಳ್ಳುತ್ತಿರುವ ಅದ್ದು ಪಡೀಲುನನ್ನು ವಶಕ್ಕೆ ಪಡೆಯಲಾಗಿದೆ.

ನಗರದ ರಸ್ತೆ ದುಃಸ್ಥಿತಿಯನ್ನು ಟೀಕಿಸಿ ಅದ್ದು ಪಡೀಲು ಅವರು ಸಾಮಾಜಿಕ ಜಾಲತಾಣದಲ್ಲಿ ನಗರಸಭೆ ಅಧ್ಯಕ್ಷೆ ಲೀಲಾವತಿ ನಾಯ್ಕ ಅವರನ್ನು ಟೀಕಿಸಿದ್ದರು. ಲೀಲಾವತಿ ಅವರು ಮಹಿಳಾ ಮತ್ತು ನಗರ ಠಾಣೆಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿರಲಿಲ್ಲ. ಈ ಬಗ್ಗೆ ರವಿವಾರ ಮಾಜಿ ಶಾಸಕ ಸಂಜೀವ ಮಠಂದೂರು ನೇತೃತ್ವದ ಬಿಜೆಪಿ ಮುಖಂಡರು ಠಾಣೆಗೆ ಮುತ್ತಿಗೆ ಹಾಕಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿದ್ದ ಘಟನೆ ನಡೆದಿತ್ತು.

ಈ ವೇಳೆ ಮಾಜಿ ಶಾಸಕ ಸಂಜೀವ ಮಠಂದೂರು ಹಾಗೂ ಪುತ್ತೂರು ನಗರ ಠಾಣಾ ಇನ್‌ಸ್ಪೆಕ್ಟರ್‌ ಜಾನ್ಸನ್‌ ಡಿ’ಸೋಜಾ, ಸರ್ಕಲ್‌ ಇನ್‌ಸ್ಪೆಕ್ಟರ್‌ ಆಂಜನೇಯ ರೆಡ್ಡಿ, ಎಎಸ್‌ಐ ಸೇಸಮ್ಮ ಅವರ ನಡುವೆ ಮಾತಿನ ಚಕಮಕಿ ನಡೆದಿತ್ತು. 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸದೇ ಹೋದಲ್ಲಿ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದ ಬೆನ್ನಲ್ಲೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next