Advertisement
ತಳಿರು ತೋರಣ, ವಿದ್ಯುತ್ ದೀಪಗಳ ಅಲಂಕಾರದಿಂದ ಶೃಂಗಾರಗೊಂಡಿದ್ದ ಮಂಜೇಶ್ವರ-ಕಾಣಿಯೂರು ರಸ್ತೆಯಲ್ಲಿ 12 ಕಿ.ಮೀ. ದೂರದ ವೀರಮಂಗಲದ ಕುಮಾರಧಾರಾ ನದಿಗೆ ಸೋಮವಾರ ಬೆಳಗ್ಗೆ ತಲುಪಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆಅವಭೃಥ ಸ್ನಾನ ಮುಗಿಸಿ ದೇವಾಲಯಕ್ಕೆ ಮರಳಿತು.
ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ತೆರಳಿ ಅಲ್ಲಿಂದ ಶ್ರೀ ದೇವರ ಸವಾರಿ ಮರಳಿ ಶ್ರೀ ಮಹಾಲಿಂಗೇಶ್ವರ ದೇವಾಲಯಕ್ಕೆ ಮರಳಿತು.
Related Articles
ಶ್ರೀ ದೇವರ ಸವಾರಿ ಮರಳಿ ಬರುವ ಸಂದರ್ಭದಲ್ಲಿ ವಿವಿಧ ವಾಹನಗಳಲ್ಲಿ ವಾದ್ಯಘೋಷ, ಶ್ರೀ ಮಹಾಲಿಂಗೇಶ್ವರ
ದೇವರ ಭಕ್ತಿ ಗೀತೆ, ಭಕ್ತರಿಂದ ಶಿವನಾಮ ಸ್ಮರಣೆ ನಡೆಯಿತು. ದೇವರೊಂದಿಗೆ ಅವಭೃಥಕ್ಕೆ ಬರಿಗಾಲಿನಲ್ಲಿ ಭಕ್ತಿ, ಶ್ರದ್ಧೆಯೊಂದಿಗೆ ತೆರಳಿದ ನೂರಾರು ಭಕ್ತರು ವೀರಮಂಗಲ ಕುಮಾರಧಾರಾ ನದಿಯಲ್ಲಿ ಶ್ರೀ ದೇವರೊಂದಿಗೆ ಸ್ನಾನ ಮುಗಿಸಿ ಮರಳಿ ದೇವರೊಂದಿಗೆ ದೇವಾಲಯಕ್ಕೆ ಆಗಮಿಸಿದರು. ಪೊಲೀಸರು ಬಿಗಿ ಭದ್ರತೆ ವಹಿಸಿದ್ದರು.
Advertisement
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ಪ್ರಧಾನ ಅರ್ಚಕ ವೆಂಕಟೇಶ ಸುಬ್ರಹ್ಮಣ್ಯ ಭಟ್, ವ್ಯವಸ್ಥಾಪನ ಸಮಿತಿ ಸದಸ್ಯರಾದ ವೀಣಾ ಬಿ.ಕೆ.,ಡಾ|ಸುಧಾ ಶ್ರೀಪತಿ ರಾವ್, ಬಿ.ಐತ್ತಪ್ಪ ನಾಯ್ಕ, ರವೀಂದ್ರನಾಥ ರೈ ಕೆ.ಎಸ್., ರಾಮದಾಸ ಗೌಡ ಎಸ್, ಶೇಖರ ನಾರಾವಿ, ರಾಮಚಂದ್ರ ಕಾಮತ್ ಮೊದಲಾದವರಿದ್ದರು.
ದೈವಗಳ ನೇಮಕೊಡಿ ಇಳಿದ ಬಳಿಕ ಎರಡು ದಿನ ದೈವಗಳ ನೇಮ, ಚೂರ್ಣೋತ್ಸವ, ವಸಂತಕಟ್ಟೆ ಪೂಜೆ ನಡೆಯುತ್ತದೆ. ಬುಧವಾರ ರಾತ್ರಿ ಪಿಲಿಭೂತ, ರಕ್ತೇಶ್ವರಿ ನೇಮ ನಡೆದು ಮಂತ್ರಾಕ್ಷತೆ, ಅಂಙಣತ್ತಾಯ, ಪಂಜುರ್ಲಿ ಇತ್ಯಾದಿ ದೈವಗಳ ನೇಮ ಜರಗುತ್ತದೆ.