Advertisement

Puttur ನವ ವಿವಾಹಿತೆ ಆತ್ಮಹತ್ಯೆ; ಪ್ರಕರಣ ದಾಖಲು

09:29 PM Feb 06, 2024 | Team Udayavani |

ಪುತ್ತೂರು: ವಿವಾಹವಾಗಿ ಒಂದೂವರೆ ತಿಂಗಳಲ್ಲಿ ನವ ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುರಿಯ ಗಡಾಜೆಯಲ್ಲಿ ಸಂಭವಿಸಿದೆ.

Advertisement

ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮಣ್ಣ ಗೌಡ ಮತ್ತು ಪುಪ್ಪ ದಂಪತಿ ಪುತ್ರಿ ನವವಿವಾಹಿತೆ ಶೋಭಾ (26) ನೇಣು ಬಿಗಿದು ಪತಿ ಮನೆಯಲ್ಲಿ ಆತ್ಯಹತ್ಯೆ ಮಾಡಿಕೊಂಡವರು.

ಶೋಭಾ ಅವರನ್ನು ಒಂದೂವರೆ ತಿಂಗಳ ಹಿಂದೆ ಪುತ್ತೂರು ಕುರಿಯ ಗಡಾಜೆ ರೋಹಿತ್‌ ಅವರಿಗೆ ಮದುವೆ ಮಾಡಿಕೊಡಲಾಗಿತ್ತು. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪುತ್ತೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿಗೆ ಕಾರಣ ತಿಳಿದು ಬಂದಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next