ಪುತ್ತೂರು: ಸರಕಾರಿ ಆಸ್ಪತ್ರೆಯ ವಠಾರದಲ್ಲಿ ಮಹಿಳೆಯರಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆಟೋ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.
ಸರಕಾರಿ ಆಸ್ಪತ್ರೆಯಲ್ಲಿ ಕಾಲು ನೋವಿನಿಂದ ಬಳಲುತ್ತಿದ್ದ ತನ್ನ ಅತ್ತೆಯ ಆರೈಕೆಗೆ ಬಂದಿದ್ದ ಮಹಿಳೆಯೋರ್ವರಿಗೆ ಅಪರಿಚಿತ ವ್ಯಕ್ತಿ ಕಿರುಕುಳ ನೀಡಿದ್ದರು. ಕೊನೆಗೆ ಅಪರಿಚಿತ ವ್ಯಕ್ತಿ ಆಸ್ಪತ್ರೆಯ ವಠಾರದಲ್ಲಿ ಹೋಗಿ ಬರುತ್ತಿರುವ ಮಹಿಳೆಯರಿಗೆ ಕಿರುಕುಳ ನೀಡುತ್ತಿರುವುದನ್ನು ಗಮನಿಸಿ ಆತನನ್ನು ವಿಚಾರಿಸಲು ಮಹಿಳೆಯ ಪತಿ ಮತ್ತು ಸಾರ್ವಜನಿಕರು ತೆರಳಿದಾಗ ಆಟೋ ರಿಕ್ಷಾ ಚಲಾಯಿಸಿಕೊಂಡು ಪರಾರಿಯಾಗಿದ್ದ.
ಈ ಕುರಿತು ಮಹಿಳೆಯೊಬ್ಬರು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಮೌಖೀಕವಾಗಿ ದೂರು ನೀಡಿದ್ದರು. ಮಹಿಳಾ ಪೊಲೀಸರು ಆಟೋ ರಿಕ್ಷಾದ ನೋಂದಾವಣೆ ಸಂಖ್ಯೆಯನ್ನು ಆಧರಿಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ : ಅಜ್ಜಿಯ ಅಂತ್ಯ ಸಂಸ್ಕಾರ ಮುಗಿಸಿ ಬರುತ್ತಿದ್ದಾಗ ಅಪಘಾತ: ಬೈಕ್ ಸವಾರ ಮೃತ್ಯು