Advertisement

ಪುತ್ತೂರು: ಸ್ಕೂಟರ್-ಮಾರುತಿ ವ್ಯಾನ್ ಡಿಕ್ಕಿ; ಸವಾರ ಗಂಭೀರ ಗಾಯ

03:06 PM Feb 01, 2023 | Team Udayavani |

ಪುತ್ತೂರು: ಸ್ಕೂಟರ್-ಮಾರುತಿ ವ್ಯಾನ್ ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಹೊರವಲಯದ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೋಳ್ಯದಲ್ಲಿ ನಡೆದಿದೆ.

Advertisement

ಪುತ್ತೂರು ದ್ವಾರಕ ಕನ್‌ಸ್ಟ್ರಕ್ಷನ್‌ನ ಶರಣ್ ಗಾಯಗೊಂಡವರು.

ಶರಣ್ ಸೈಟ್ ಇನ್‌ಸ್ಪೆಕ್ಷನ್ ಗೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಪೋಳ್ಯ ಸಮೀಪ ವಿರುದ್ಧ ದಿಕ್ಕಿನಿಂದ ಬಂದ ಮಾರುತಿ ವ್ಯಾನ್ ಡಿಕ್ಕಿ ಹೊಡೆದಿದ್ದು, ಈ ಪರಿಣಾಮ ಘಟನೆಯಿಂದ ತೀವ್ರ ಗಾಯಗೊಂಡ ಶರಣ್ ಅವರನ್ನು ಅದೇ ದಾರಿಯಲ್ಲಿ ಬರುತ್ತಿದ್ದ ಡಾ. ದೇವಿಪ್ರಸಾದ್ ಅವರು ಎಂಬವರು ತನ್ನ ವಾಹನದಲ್ಲಿ ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next