Advertisement

Puttur: Praveen Nettaru Case; ಆರೋಪಿಗಳಿಗೆ ಸಹಕಾರ ನೀಡಿದ್ದಾತನ ಮನೆಗೆ ಎನ್‌ಐಎ ದಾಳಿ

12:48 PM Dec 05, 2024 | Team Udayavani |

ಪುತ್ತೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ ಎನ್ನಲಾದ ಅಬೂಬಕ್ಕರ್ ಸಿದ್ದಿಕ್‌ ಅವರ ಪತ್ನಿ ವಾಸವಾಗಿರುವ ಕೆಯ್ಯೂರಿನ ಮನೆಗೆ ಎನ್‌ಐಎ ಅಧಿಕಾರಿಗಳು ಆಗಮಿಸಿ ತನಿಖೆ ನಡೆಸಿದ ಘಟನೆ ಡಿ.5ರ ಗುರುವಾರ ಬೆಳಿಗ್ಗೆ ನಡೆದಿದೆ.

Advertisement

ಕೆಯ್ಯೂರು ಶಾಲಾ ಬಳಿಯ ಬಾಡಿಗೆ ಮನೆಯೊಂದರಲ್ಲಿ ಅಬೂಬಕ್ಕರ್ ಸಿದ್ದಿಕ್‌ ಅವರ ಪತ್ನಿ ವಾಸವಾಗಿದ್ದಾರೆ ಎನ್ನಲಾಗಿದ್ದು, ಅಲ್ಲಿಗೆ ಆಗಮಿಸಿದ ಎನ್‌ಐಎ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಇದಲ್ಲದೆ ಸಿದ್ದಿಕ್‌ ಅವರ ಸಹೋದರರೋರ್ವರು ಕೆಯ್ಯೂರಿನ ಅರಿಕ್ಕಿಲದಲ್ಲಿ ವಾಸವಾಗಿದ್ದು, ಅಲ್ಲಿಗೂ ಆಗಮಿಸಿದ ಅಧಿಕಾರಿಗಳು ತನಿಖೆ ನಡೆಸಿದ್ದಾರೆ.

ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಪದಾಧಿಕಾರಿಯಾಗಿದ್ದ ಪ್ರವೀಣ್ ನೆಟ್ಟಾರ್ ಅವರನ್ನು 2022ರ ಜು.26 ರಂದು ದುಷ್ಕರ್ಮಿಗಳು ಮಾರಕಾಯುಧಗಳಿಂದ ದಾಳಿ ನಡೆಸಿ ಕೊಲೆ ಮಾಡಲಾಗಿತ್ತು. ಕೊಲೆಯ ಸಂದರ್ಭ ಅಬೂಬಕ್ಕರ್ ಸಿದ್ದಿಕ್‌ ಅವರು ಸ್ಥಳದಲ್ಲೇ ಇದ್ದು ಆರೋಪಿಗಳಿಗೆ ಸಹಕಾರ ನೀಡಿದ ಆರೋಪ ಎದುರಿಸುತ್ತಿದ್ದು ಸದ್ಯ ತಲೆ ಮರೆಸಿಕೊಂಡಿದ್ದಾರೆ.

ಸರ್ಚ್ ವಾರೆಂಟ್ ಪಡೆದ ಎನ್‌ಐಎ ಪೊಲೀಸರು ಕೆಯ್ಯೂರಿಗೆ ಆಗಮಿಸಿ ತನಿಖೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next