Advertisement
7ನೇ ವೇತನ ಆಯೋಗದ ಶಿಫಾ ರಸ್ಸುಗಳನ್ನು ಎಲ್ಲ ರಾಜ್ಯಗಳಲ್ಲಿ ತತ್‌ಕ್ಷಣ ಜಾರಿಗೊಳಿಸಬೇಕು. ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆಯನ್ನೇ ಜಾರಿ ಗೊಳಿ ಸಬೇಕು. ಪ್ರಾಥಮಿಕ ಶಿಕ್ಷಣದ ಅಭಿ ವೃದ್ಧಿಗಾಗಿ ಪ್ರಾಥಮಿಕ ಶಿಕ್ಷಣ ಮಂಡಳಿ ಸ್ಥಾಪಿಸಬೇಕು. ರಾಜ್ಯದ ಎಲ್ಲ ಸರಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ (ಎಲ್‌ಕೆಜಿ, ಯುಕೆಜಿ) ಆರಂಭಿಸಬೇಕು. ಸರಕಾರಿ ಶಾಲೆಗಳ ಸಬಲೀಕರಣಕ್ಕಾಗಿ ಕನಿಷ್ಠ ವರ್ಷಕ್ಕೆ ಒಬ್ಬ ಶಿಕ್ಷಕರು (ಶಿಕ್ಷಕ/ವಿದ್ಯಾರ್ಥಿ ಅನುಪಾತ 1:30) ಶಾಲೆಗೆ ಒಬ್ಬ ಮುಖ್ಯಶಿಕ್ಷಕರನ್ನು ನಿಯುಕ್ತಿಗೊಳಿಸಬೇಕು ಮೊದಲಾದ ಬೇಡಿಕೆಗಳನ್ನಿಟ್ಟು ಪ್ರತಿಭಟನೆ ನಡೆಯಿತು.
ಪ್ರಾ. ಶಾಲಾ ಶಿಕ್ಷಕರ ಸಂಘ ಪುತ್ತೂರು ತಾ| ಸಮಿತಿ ಪ್ರಧಾನ ಕಾರ್ಯದರ್ಶಿ ಎಂ. ಮಾಮಚ್ಚನ್ ಮಾತನಾಡಿ, ಶಿಕ್ಷಕರ ಬೇಡಿಕೆಗಳ ಕುರಿತಂತೆ ಮಾ. 17ರಂದು ರಾಜ್ಯದ ಎಲ್ಲ ಶಿಕ್ಷಕರಿಗೆ ಮನವಿ ನೀಡುವ ಅಭಿಯಾನ ಕೈಗೊಳ್ಳಲಾಗಿತ್ತು. ಮಾ. 31ಕ್ಕೆ ಗಡುವು ನೀಡಲಾಗಿತ್ತಾದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಮುಂದೆ ಆ. 5ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಸೇರಿ ಧರಣಿ, ಸೆ. 5ರಂದು ರಾಜ್ಯದೆಲ್ಲೆಡೆ ಧರಣಿ ನಡೆಸಲಿದ್ದೇವೆ. ಅಕ್ಟೋಬರ್‌ನಲ್ಲಿ ದಿಲ್ಲಿ ಯಲ್ಲಿ ಎಲ್ಲ ಸಂಘದವರು ಸೇರಿ ಉಗ್ರ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು. ಮನವಿ ಸಲ್ಲಿಕೆ
ಸಾಂಕೇತಿಕ ಪ್ರತಿಭಟನೆಯ ಬಳಿಕ ಬೇಡಿ ಕೆಗಳ ಈಡೇರಿಕೆಗಾಗಿ ಪ್ರಧಾನ ಮಂತ್ರಿ, ರಾಷ್ಟ್ರಪತಿ, ರಾಜ್ಯದ ಮುಖ್ಯಮಂತ್ರಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಯವರ ಮೂಲಕ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಶಿಕ್ಷಣಾಧಿಕಾರಿ ಶಶಿಧರ್ ಜಿ.ಎಸ್. ಅವರು, ಮನವಿಯನ್ನು ಉನ್ನತ ಅಧಿಕಾರಿಗಳಿಗೆ, ಸಂಬಂಧಿಸಿದವರಿಗೆ ತಲುಪಿಸುವ ಭರವಸೆ ನೀಡಿದರು. ಎಪಿಎಂಸಿ ಚುನಾವಣೆ ಕರ್ತವ್ಯ ಹಾಗೂ ಎಸ್ಸೆಸೆಲ್ಸಿ ಮೌಲ್ಯಮಾಪನದ ಹಿನ್ನೆಲೆಯಲ್ಲಿ ಅಂದಾಜು 30 ಶಿಕ್ಷಕರಷ್ಟೇ ಸಂಘದ ಎಂ. ಮಾಮಚ್ಚನ್ ನೇತೃತ್ವದಲ್ಲಿ ಪಾಲ್ಗೊಂಡರು.