ಪ್ರಕರಣದ ಸಂತ್ರಸ್ತೆಗೆ ಶಿಕ್ಷಣ ಮುಂದುವರಿ ಸಲು ಹೊರಜಿಲ್ಲೆಯಲ್ಲಿ ವ್ಯವಸ್ಥೆ ಕಲ್ಪಿಸಲಾಗು ವುದು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಎಸ್. ಕುಂದರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
Advertisement
ಪುತ್ತೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂ ಪ್ರೇರಿತವಾಗಿ ಕೈಗೆತ್ತಿಕೊಂಡಿದ್ದು ಇದರನ್ವಯ ಮಂಗಳೂರಿಗೆ ಆಗಮಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜತೆ ಸಭೆ ನಡೆಸಿದ್ದೇನೆ. ಸಂತ್ರಸ್ತೆಯ ಮನೆಗೆ ಹಾಗೂ ಆಕೆ ಶಿಕ್ಷಣ ಪಡೆಯುತ್ತಿರುವ ಕಾಲೇಜಿಗೆ ಸೋಮವಾರ ಭೇಟಿ ನೀಡಿ ಮಾಹಿತಿ ಸಂಗ್ರ ಹಿಸಿದ್ದೇನೆ ಎಂದರು.
ಸಂತ್ರಸ್ತೆ ಮಾನಸಿಕವಾಗಿ ಕುಗ್ಗಿದ್ದು ಶಿಕ್ಷಣ ಮೊಟಕು ಗೊಳ್ಳುವ ಪರಿಸ್ಥಿತಿ ಇದೆ. ಆಕೆಗೆ ಕೌನ್ಸೆಲಿಂಗ್ ನಡೆಸಿ ಮಾನಸಿಕ ವಾಗಿ ಧೈರ್ಯ ತುಂಬುವ ಕಾರ್ಯ ಅಗತ್ಯವಿದೆ. ನಾನು ಇಂದು ಆಕೆಯ ಮನೆಗೆ ಭೇಟಿ ನೀಡಿ ಸುಮಾರು 1 ತಾಸು ಮಾತನಾಡಿದ್ದು ಶಿಕ್ಷಣ ಮುಂದುವರಿಸುವ ಆವಶ್ಯಕತೆಯನ್ನು ಮನವರಿಕೆ ಮಾಡಿದ್ದೇನೆ. ಆಕೆಯೂ ಒಪ್ಪಿದ್ದಾಳೆ. ಹೊರಜಿಲ್ಲೆಯಲ್ಲಿ ಶಿಕ್ಷಣ ಮುಂದು ವರಿಸಲು ವ್ಯವಸ್ಥೆ ಮಾಡಲಾಗುವುದು. ಇದರ ಜತೆಗೆ ಆಕೆಯ ತಮ್ಮ ದ್ವಿತೀಯ ಪಿಯುಸಿಯಲ್ಲಿದ್ದು ಕಾಲೇಜಿಗೆ ಹೋಗಲು ಹಿಂಜರಿಯುತ್ತಿದ್ದಾನೆ. ಆತನಿಗೂ ಕೌನ್ಸೆಲಿಂಗ್ ಮಾಡಲಾಗುವುದು ಎಂದರು. 4.12 ಲಕ್ಷ ರೂ. ಪರಿಹಾರ
ಸಮಾಜ ಕಲ್ಯಾಣ ಇಲಾಖೆಯಿಂದ 4.12 ಲಕ್ಷ ರೂ. ಪರಿಹಾರದ ಚೆಕ್ ಸಿದ್ಧಗೊಂಡಿದ್ದು ಅದನ್ನು ಸಂತ್ರಸ್ತೆಗೆ ಹಸ್ತಾಂತರಿಸಲಾಗುವುದು. ಇದಲ್ಲದೆ ಇನ್ನೂ 4 ಲಕ್ಷ ರೂ. ಪರಿಹಾರ ನೀಡಲು ವ್ಯವಸ್ಥೆ ಮಾಡಲಾಗುವುದು. ಆಕೆ ಆಘಾತದಿಂದ ಚೇತರಿಸಿಕೊಂಡು ಶಿಕ್ಷಣ ಮುಂದುವರಿಸಿ ಉನ್ನತ ಜೀವನ ಕಂಡುಕೊಳ್ಳಲು ರಾಷ್ಟ್ರೀಯ ಮಹಿಳಾ ಆಯೋಗ ಮತ್ತು ವಿವಿಧ ಇಲಾಖೆಗಳಿಂದ ಸರ್ವ ವ್ಯವಸ್ಥೆ ಕಲ್ಪಿಸಲಾಗುವುದು. ಜತೆಗೆ ಅಪರಾಧಿಗಳಿಗೆ ಕಠಿನ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕಾಗಿದೆ. ಈಗಾಗಲೇ ಪೊಲೀಸ್ ಇಲಾಖೆ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡಿದೆ ಎಂದರು.
Related Articles
Advertisement
16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬೇಸಿಕ್ ಸೆಟ್ ಬಳಸಲು ಮಾತ್ರ ಅವಕಾಶ ಇರುವ ಬಗ್ಗೆ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದವರು ಅಭಿಪ್ರಾಯಪಟ್ಟರು. ಹೆತ್ತವರು ಹೆಣ್ಣು ಹಾಗೂ ಗಂಡು ಮಕ್ಕಳ ಚಲನ ವಲನಗಳ ಬಗ್ಗೆ ನಿಗಾವಹಿಸುವುದು ಅಗತ್ಯ. ಅವರಿಗೆ ಸಾಮಾಜಿಕ ಅನಿಷ್ಟಗಳ ಬಗ್ಗೆ ಅರಿವು ಮೂಡಿಸುವ ಕಾರ್ಯ ಪರಿಣಾಮಕಾರಿಯಾಗಿ ನಡೆಯಬೇಕು ಎಂದು ತಿಳಿಸಿದರು.