Advertisement
ಬನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿಕ್ಕಮುಡ್ನೂರು ಗ್ರಾಮದ ಬೀರ‍್ನಹಿತ್ಲು ಎಂಬಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಭಾರತಿ ಎಂಬವರು ಶಾಲೆಯ 30ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಬಸ್ಸಿನಲ್ಲಿ ಪ್ರವಾಸಕ್ಕೆ ಕರೆದುಕೊಂಡು ಹೋಗಿರುವ ಘಟನೆ ಫೆ.4ರಂದು ಬೆಳಕಿಗೆ ಬಂದಿದೆ.
Related Articles
Advertisement
ಇದರಿಂದಾಗಿ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿದೆ. ಶಾಲೆಯಲ್ಲಿ 6 ಮತ್ತು 7ನೇ ತರಗತಿಯ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಭಾರತಿಯವರು 3ರಿಂದ 7ನೇ ತರಗತಿಯವರೆಗಿನ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ವಾರದ ಹಿಂದೆಯೇ ಇವರು ಮಕ್ಕಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಲು ಸಿದ್ಧತೆ ನಡೆಸಿದ್ದರು ಎನ್ನಲಾಗಿದ್ದು ಈ ಬಗ್ಗೆ ಯಾರಿಗೂ ಹೇಳದಂತೆ ವಿದ್ಯಾರ್ಥಿಗಳಿಗೆ ಹೇಳಿದ್ದರು ಎಂದು ಮಾಹಿತಿ ಲಭ್ಯವಾಗಿದೆ.
ಶಾಲೆಯಿಂದ ಅಧಿಕೃತ ಪ್ರವಾಸ ಹೋಗಲಾಗುತ್ತಿದೆ ಎಂದು ತಿಳಿದು ಮಕ್ಕಳನ್ನು ಪೋಷಕರು ಕಳುಹಿಸಿಕೊಟ್ಟಿದ್ದಾರೆ. ಆದರೆ, ಘಟನೆ ಬೆಳಕಿಗೆ ಬಂದಾಗ ಪೋಷಕರು ಆತಂಕಕ್ಕೀಡಾಗಿದ್ದಾರೆ.
ಈ ಕುರಿತು ಮಾಹಿತಿ ಪಡೆದ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ಅವರು ಶಾಲೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಅಲ್ಲದೆ, ಪೊಲೀಸ್ ಇಲಾಖೆಗೆ ಮೌಖಿಕ ಮಾಹಿತಿ ನೀಡಿದ್ದಾರೆ.
‘ಪ್ರವಾಸಕ್ಕೆ ಹೋಗುವ ಕುರಿತು ಯಾವುದೇ ನಿರ್ಧಾರ ಆಗಿಲ್ಲ. ಪ್ರವಾಸ ಹೋಗಲು ಯಾರಿಗೂ ಒಪ್ಪಿಗೆ ನೀಡಿಲ್ಲ. ಅನಧಿಕೃತವಾಗಿ ಶಿಕ್ಷಕಿ ಭಾರತಿ ಅವರು ಮಕ್ಕಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದು ಈ ಬಗ್ಗೆ ದೂರು ನೀಡಲಿದ್ದೇವೆ’ಎಂದು ಎಸ್‌ಡಿಎಂಸಿ ಅಧ್ಯಕ್ಷೆ ನಳಿನಿ ರಾಜೇಶ್ ತಿಳಿಸಿದ್ದಾರೆ.