Advertisement
ಕೆದಿಲದ ರಮ್ಲ ಕುಂಞಿ ಮನೆಯಲ್ಲಿ ಕಳ್ಳತನಗೈದಿದ್ದ ಆರೋಪಿ ಕೋಡಿ ನಿವಾಸಿ ಉಮ್ಮರ್ ಫಾರೂಕ್ ಅವರ ಮನೆಯಂಗಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಕಳವುಗೈದಿದ್ದ. ಈ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿಯು ಕಳವು ಗೈದ ದ್ವಿಚಕ್ರವಾಹನ ಗುಡ್ಡ ಪ್ರದೇಶದಲ್ಲಿ ಅಡಗಿಸಿಟ್ಟಿದ್ದ. ಅದನ್ನು ತೆಗೆದುಕೊಂಡು ಹೋಗುವ ನಿಟ್ಟಿನಲ್ಲಿ ಸೋಮವಾರ ಅಬೂಬ್ಬಕರ್‌ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಖರೀದಿಸಿದನು. ಇದನ್ನು ಗಮನಿಸಿದ ಸ್ಥಳೀಯರಿಗೆ ಅನುಮಾನ ಉಂಟಾಗಿ ಅವರು ಆತನ ಬೆನ್ನ ಹಿಂದೆ ಬಿದ್ದರು. ಆತ ಬೈಕ್ ಅಡಗಿಸಿಟ್ಟಿದ್ದ ಗುಡ್ಡಕ್ಕೆ ತೆರಳಿದಾಗ ಸ್ಥಳೀಯರು ರೆಡ್ ಹ್ಯಾಂಡ್ ಆಗಿ ಹಿಡಿದು ವಿಚಾರಿಸಿದ್ದು, ಆತ ಕಳ್ಳತನ ನಡೆಸಿರುವುದು ಬೆಳಕಿಗೆ ಬಂದಿದೆ. ಬಳಿಕ ಸ್ಥಳೀಯರು ಆತನನ್ನು ಠಾಣೆಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ. ಒಂದೇ ದಿನ 2 ಕಳ್ಳತನ
ರಮ್ಲ ಕುಂಞಿ ಬೆಂಗಳೂರು ಕಂಬಳಕ್ಕೆ ವ್ಯಾಪಾರಕ್ಕೆಂದು ನ. 22ರಂದು ರಾತ್ರಿ 8 ಗಂಟೆಗೆ ಮನೆಗೆ ಬೀಗ ಹಾಕಿ ತೆರಳಿದ್ದು, ಕೆದಿಲ ಮಿತ್ತಪಡ್ಪು ನಿವಾಸಿ ಹಮೀದ್ ನ. 23ರಂದು ಬೆಳಗ್ಗೆ ಹೋಗಿ ನೋಡುವ ಸಂದರ್ಭದಲ್ಲಿ ಬೀಗ ಮುರಿದಿದ್ದು ಪತ್ತೆಯಾಗಿತ್ತು. ಕಪಾಟಿನಲ್ಲಿದ್ದ ಸುಮಾರು 2 ಲಕ್ಷ ಕಳವಾಗಿತ್ತು. ಇದರ ಜತೆಗೆ ಕೋಡಿ ನಿವಾಸಿ ಉಮ್ಮರ್‌ಫಾರೂಕ್ ಅವರಿಗೆ ಸೇರಿದ ದ್ವಿಚಕ್ರವಾಹನ ಮನೆಯ ಅಂಗಳದಿಂದ ಕಳವಾಗಿತ್ತು. ಈ ಬಗ್ಗೆ ನಗರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು.