Advertisement
ಸಂತ್ರಸ್ತ ಮಹಿಳೆಯನ್ನು ಸೆ. 2ರಂದು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಿ ಬಳಿಕ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಮುಂದೆ ಆಕೆಯ ಹೇಳಿಕೆ ಪಡೆದುಕೊಳ್ಳಲಾಗಿತ್ತು. ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆಕೆ ನೀಡಿದ ದೂರಿನಲ್ಲಿರುವ ಬೆಂಗಳೂರು ಹೊಟೇಲ್ಗೆ ಸೆ. 3ರಂದು ಬೆಳಗ್ಗೆ ಪೊಲೀಸರು ತೆರಳಿ ಮಹಜರು ನಡೆಸಿರುವ ಮಾಹಿತಿ ಲಭ್ಯವಾಗಿದೆ.
ಅರುಣ್ ಪುತ್ತಿಲ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಶಾಸಕ ಅಶೋಕ್ ಕುಮಾರ್ ರೈ, ಸುಖಾಸುಮ್ಮನೆ ಯಾರಿಗೂ ಅನ್ಯಾಯವಾಗಬಾರದು. ನಾನು ಈ ವಿಚಾರವನ್ನು ರಾಜಕೀಯವಾಗಿ ಬಳಸಿಕೊಳ್ಳುವುದಿಲ್ಲ. ಈ ಪ್ರಕರಣದಲ್ಲಿ ನಾನು ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ. ಕಾನೂನಿನ ಪ್ರಕಾರ ತನಿಖೆ ನಡೆಯುತ್ತಿದೆ. ಸರಕಾರದಿದ ಒತ್ತಡ ಹಾಕಿಸಿ ರಾಜಕೀಯ ದುರುದ್ದೇಶದಿಂದ ಯಾರನ್ನು ತೇಜೋವಧೆ ಮಾಡುವ ಪ್ರಯತ್ನ ಮಾಡುವುದಿಲ್ಲ ಎಂದಿದ್ದಾರೆ.