Advertisement
ಹೀಗಾಗಿ ಕ್ರೀಡೆಯಲ್ಲಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪುತ್ತೂರನ್ನು ಬೆಳಗಿದ ನೂರಾರು ಕ್ರೀಡಾಪಟುಗಳಿದ್ದರೂ ತರಬೇತಿಗೆ ಸುಸಜ್ಜಿತ ಕ್ರೀಡಾಂಗಣದ ಕೊರತೆ ಇದೆ.
1991-92ರ ಅನಂತರ ಕೊಂಬೆಟ್ಟು ಡಿಸ್ಟ್ರಿಕ್ ಶಾಲಾ ಆವರಣದಲ್ಲಿದ್ದ ಕ್ರೀಡಾಂಗಣ ತಾಲೂಕು ಕ್ರೀಡಾಂಗಣವಾಗಿ ಯುವಜನ ಸೇವಾ ಇಲಾಖೆಯ ವ್ಯಾಪ್ತಿಗೆ ಸೇರ್ಪಡೆಗೊಂಡಿತ್ತು. 400 ಮೀಟರ್ ಮಣ್ಣಿನ ಟ್ರಾಫಿಕ್ ಇರುವ ಕ್ರೀಡಾಂಗಣ ದಲ್ಲಿ ತಾಲೂಕು, ಜಿಲ್ಲಾ, ರಾಜ್ಯಮಟ್ಟದ ಕ್ರೀಡಾ ಕೂಟಗಳೂ ನಡೆಯುತ್ತಿವೆ. ಹಿಂದೊಮ್ಮೆ ಸಿಂಥೆಟಿಕ್ ಟ್ರಾಫಿಕ್ ನಿರ್ಮಾಣ ಸೇರಿದಂತೆ ಕ್ರೀಡಾಂಗಣದ ಅಭಿವೃದ್ಧಿಗಾಗಿ 14.5 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದರಲ್ಲಿ ಮೊದಲ ಹಂತದಲ್ಲಿ ಮೂರು ಕೋಟಿ ರೂ. ಮಂಜೂರಾತಿಗೆ ಸರಕಾರ ತಾತ್ವಿಕ ಒಪ್ಪಿಗೆ ನೀಡಿತ್ತು. ಮೊದಲ ಹಂತದ 3 ಕೋಟಿ ರೂ. ಅನುದಾನದ ಒಳಾಂಗಣ ಕ್ರೀಡಾಂಗಣ ನಿರ್ಮಾಣ ಕಾಮಗಾರಿಗೆ ಕ್ರಿಯಾಯೋಜನೆ ಆಡಳಿತಾತ್ಮಕ ಮಂಜೂರಾತಿಗೆ ಲೋಕೋಪಯೋಗಿ ಇಲಾಖೆ ಮೂಲಕ ಸರಕಾರಕ್ಕೆ ಸಲ್ಲಿಕೆಯಾಗಿತ್ತು. ಹೊಸ ಕ್ರೀಡಾಂಗಣ
2018ರಲ್ಲಿ ಕೊಂಬೆಟ್ಟು ಕ್ರೀಡಾಂಗಣವನ್ನು ತಾಲೂಕು ಕ್ರೀಡಾಂಗಣವನ್ನಾಗಿ ಪರಿವರ್ತಿಸುವ ಬದಲು ತಾಲೂಕು ಕ್ರೀಡಾಂಗಣಕ್ಕೆ ಪ್ರತ್ಯೇಕ ಜಾಗ ಗುರುತಿಸುವ ಯೋಜನೆ ರೂಪಿಸಲಾಯಿತು. ಈ ಹಿಂದಿನಂತೆ ಕೊಂಬೆಟ್ಟು ಕ್ರೀಡಾಂಗಣವನ್ನು ಶಾಲಾ ವಿದ್ಯಾರ್ಥಿಗಳ ಬಳಕೆಗೆ ನೀಡುವ ಉದ್ದೇಶ ಹೊಂದಲಾಗಿತ್ತು. ಅದರಂತೆ ಜಾಗ ಗುರುತಿಸುವ ಪ್ರಯತ್ನ ನಡೆದರೂ ವಿವಿಧ ಕಾರಣಗಳಿಂದ ಅಂತಿಮಗೊಂಡಿಲ್ಲ.
Related Articles
Advertisement
ಕಿರಣ್ ಪ್ರಸಾದ್ ಕುಂಡಡ್ಕ