Advertisement
ದ.ಕ. ಜಿಲ್ಲಾಡಳಿತ, ಜಿ.ಪಂ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ.ಕ. ಜಿಲ್ಲಾ ಮತ್ತು ರಾಜ್ಯ ಯುವಜನ ಒಕ್ಕೂಟ, ಪುತ್ತೂರು ತಾಲೂಕು ಯುವಜನ ಒಕ್ಕೂಟದ ಸಹ ಯೋಗದಲ್ಲಿ ಪುತ್ತೂರಿನ ಸುದಾನ ಶಾಲೆಯಲ್ಲಿ ಆಯೋಜಿಸಲಾದ 2017-18ನೇ ಸಾಲಿನ ರಾಜ್ಯ ಮಟ್ಟದ ಯುವಜನ ಮೇಳವನ್ನು ಗುರುವಾರ ಸಂಜೆ ಉದ್ಘಾಟಿಸಿ ಅವರು ಮಾತನಾಡಿದರು. ತಮ್ಮ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಅವಧಿ ಯಲ್ಲಿ ಎರಡನೇ ಬಾರಿಗೆ ರಾಜ್ಯ ಯುವಜನ ಮೇಳವನ್ನು ನಡೆಸುವ ಅವಕಾಶ ಲಭಿಸಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ಅವರು, ತಾಲೂಕು ಮಟ್ಟ ಹಾಗೂ ವಿಭಾಗ ಮಟ್ಟದಲ್ಲಿ ಪ್ರಸ್ತುತ ನಿಲ್ಲಿಸ ಲಾಗಿರುವ ಯುವಜನ ಮೇಳವನ್ನು ಮರು ಆರಂಭಿಸಲು ಸರಕಾರವನ್ನು ಒತ್ತಾಯಿಸುವ ಭರವಸೆ ನೀಡಿದರು.
ಮೇಳವನ್ನು ಉದ್ಘಾಟಿಸಿದ ದ.ಕ. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮಾತನಾಡಿ, ತುಳುನಾಡಿನ ಸಂಸ್ಕೃತಿಯ ಪರಂಪರೆಯನ್ನು ಒಳಗೊಂಡ ಕಲಾ ಪ್ರಕಾರಗಳು ಸೇರಿದಂತೆ ಬಹಳಷ್ಟು ಜನಪದ ಕಲೆಗಳನ್ನು ಜನತೆಯ ಬಳಿಗೆ ಕೊಂಡೊಯ್ಯುವ ಕೆಲಸವನ್ನು ಯುವ ಸಮುದಾಯ ಮಾಡಬೇಕು ಎಂದರು.
Related Articles
Advertisement
ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್. ಖಾದರ್, ರಾಜ್ಯ ಅರೆಭಾಷೆ ಅಕಾ ಡೆಮಿ ಅಧ್ಯಕ್ಷ ಪಿ.ಸಿ. ಜಯರಾಮ, ಜಿ.ಪಂ. ಸದಸ್ಯರಾದ ಸರ್ವೋತ್ತಮ ಗೌಡ, ಪಿ.ಪಿ. ವರ್ಗೀಸ್, ಪ್ರಮೀಳಾ ಜನಾರ್ದನ, ಅನಿತಾ ಹೇಮನಾಥ ಶೆಟ್ಟಿ, ಪುತ್ತೂರು ಮಾçದೆ ದೇವುಸ್ ಚರ್ಚ್‌ನ ಧರ್ಮಗುರು ವಂ| ಆಲ್ಫೆ†ಡ್ ಜೆ. ಪಿಂಟೋ, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಜಗದೀಶ್ ಎಸ್., ನಗರ ಸಭೆಯ ಪೌರಾಯುಕ್ತೆ ರೂಪಾ ಟಿ. ಶೆಟ್ಟಿ, ತಾ.ಪಂ. ಸದಸ್ಯರಾದ ಸಾಜ ರಾಧಾಕೃಷ್ಣ ಆಳ್ವ, ಉಷಾ ಅಂಚನ್, ಮೀನಾಕ್ಷಿ ಮಂಜುನಾಥ, ಬಿಇಒ ಸುಕನ್ಯಾ ಡಿ.ಎನ್., ಶ್ರೀ ರಾಮಕೃಷ್ಣ ಪ್ರೌಢ ಶಾಲೆಯ ಸಂಚಾಲಕ ಎ. ಹೇಮನಾಥ ಶೆಟ್ಟಿ, ಸುದಾನ ಶಾಲೆಯ ಮುಖ್ಯಗುರು ಶೋಭಾ ನಾಗರಾಜ್, ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಮಾಮಚ್ಚನ್ ಎಂ., ನಗರಸಭಾ ಸದಸ್ಯರಾದ ಝೊಹರಾ ನಿಸಾರ್, ಜೀವಂಧರ್ ಜೈನ್, ಜಯಲಕ್ಷ್ಮೀ ಸುರೇಶ್, ಉಡುಪಿ ಜಿಲ್ಲಾ ಸಹಾಯಕ ನಿರ್ದೇಶಕ ರೋಶನ್ ಶೆಟ್ಟಿ, ವಿಶ್ವನಾಥ, ಮಹಮ್ಮದ್ ಕುಕ್ಕುವಳ್ಳಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಜಿಲ್ಲಾ ಯುವ ಸಬಲೀಕರಣ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿ’ಸೋಜಾ ಪ್ರಸ್ತಾವನೆಗೈದು ಸ್ವಾಗತಿಸಿದರು. ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮ ನಿರ್ವಹಿಸಿದರು. ಫೆ. 4ರ ತನಕ ನಡೆಯಲಿರುವ ರಾಜ್ಯ ಯುವಜನ ಮೇಳದಲ್ಲಿ ಭಾಗವಹಿಸಲು 5,000ಕ್ಕೂ ಮಿಕ್ಕಿ ಸ್ಪರ್ಧಾಳುಗಳು ಪುತ್ತೂರಿಗೆ ಆಗಮಿಸಿದ್ದಾರೆ.