ಪುತ್ತೂರು: ಹಾಡಹಗಲೇ ಮನೆಯಿಂದ ಕಳ್ಳತನ ನಡೆಸಿರುವ ಘಟನೆ ಸೋಮವಾರ ಬನ್ನೂರಿನಲ್ಲಿ ನಡೆದಿದೆ.
Advertisement
ಬನ್ನೂರು ಕುಂಟ್ಯಾನ ಸದಾಶಿವ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಮೌನಿಶ್ ಅವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದೆ.
ಸೋಮವಾರ ಮಧ್ಯಾಹ್ನ 12 ಗಂಟೆಗೆ ಮನೆಯವರು ಬಂದಾಗ ಮನೆ ಹಿಂಭಾಗ ಬೀಗ ಮುರಿದು ಕಳ್ಳರು ಒಳಹೊಕ್ಕು ಕಳ್ಳತನ ಮಾಡಿರುವುದು ಗಮನಕ್ಕೆ ಬಂದಿದೆ. ಮನೆಯ ವಸ್ತುಗಳೆಲ್ಲ ಚಲ್ಲಾಪಿಲ್ಲಿಯಾಗಿ ಬಿದ್ದಿದ್ದು ಪೊಲೀಸರಿಗೆ ದೂರು ನೀಡಲಾಗಿದೆ. ಬೆರಳಚ್ಚು ತಜ್ಞರು ಮತ್ತು ಶ್ವಾನದಳ ಘಟನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.