ಪುತ್ತೂರು ತಾಲೂಕಿನ ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಮಂಗಳವಾರ ಬೆಳಗ್ಗಿನಿಂದ ನಿರಂತರ ಸಾಧಾರಣ ಮಳೆಯಾಗಿದೆ. ತಾಲೂಕಿನ ಕುಂಬ್ರ, ಈಶ್ವರಮಂಗಲ, ಸುಳ್ಯಪದವು, ಬೆಟ್ಟಂಪಾಡಿ, ನೆಲ್ಯಾಡಿ, ಉಪ್ಪಿನಂಗಡಿ, ಪುರುಷರಕಟ್ಟೆ ಮೊದಲಾದ ಕಡೆಗಳಲ್ಲಿ ಉತ್ತಮವಾಗಿ ಮಳೆ ಸುರಿದಿದೆ. ಚರಂಡಿ, ಹಳ್ಳ, ಹೊಳೆಗಳಲ್ಲಿ ನೀರಿನ ಹರಿವು ಹೆಚ್ಚಾಗಿತ್ತು. ಚರಂಡಿ ಅವ್ಯವಸ್ಥೆಯ ಕಾರಣದಿಂದ ಹಲವು ಕಡೆಗಳಲ್ಲಿ ರಸ್ತೆಯಲ್ಲೇ ನೀರು ಹರಿಯುವ ದೃಶ್ಯ ಕಂಡುಬಂತು.
Advertisement
77 ಮಿ.ಮೀ. ಮಳೆಸೋಮವಾರ ಬೆಳಗ್ಗಿನಿಂದ ಮಂಗಳವಾರ ಬೆಳಗ್ಗಿನ ವರೆಗಿನ 24 ಗಂಟೆಗಳ ಅವಧಿಯಲ್ಲಿ ಪುತ್ತೂರು ತಾಲೂಕಿನಾದ್ಯಂತ ಒಟ್ಟು 77 ಮಿ.ಮೀ. ಹಾಗೂ ಸರಾಸರಿ 12.8 ಮಿ.ಮೀ. ಮಳೆಯಾಗಿದೆ. ಪುತ್ತೂರು ನಗರದಲ್ಲಿ 8.6 ಮಿ.ಮೀ., ಉಪ್ಪಿನಂಗಡಿಯಲ್ಲಿ 17 ಮಿ.ಮೀ., ಶಿರಾಡಿಯಲ್ಲಿ 24 ಮಿ.ಮೀ., ಕೊಯಿಲದಲ್ಲಿ 9.8 ಮಿ.ಮೀ., ಐತ್ತೂರುನಲ್ಲಿ 9.2 ಮಿ.ಮೀ., ಕಡಬದಲ್ಲಿ 8.4 ಮಿ.ಮೀ. ಮಳೆ ಸುರಿದಿದೆ. ಮಂಗಳವಾರ ಬೆಳಗ್ಗಿನ ಬಳಿಕ ಮಳೆಯ ಪ್ರಮಾಣ ಹೆಚ್ಚಾಗಿದೆ.