Advertisement
ಪುತ್ತೂರು ತಾಲೂಕಿನ 21,138 ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವ ಗುರಿಯನ್ನು ತಾಲೂಕು ಆರೋಗ್ಯ ಇಲಾಖೆ ಇಟ್ಟುಕೊಂಡಿದೆ. ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ 3096 ಮಕ್ಕಳಿಗೆ ಲಸಿಕೆ ಹಾಕಿಸುವ ಗುರಿ ಇದೆ. ಗ್ರಾಮಾಂತರ ಭಾಗದಲ್ಲಿ 145 ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ 18 ಬೂತ್‌ಗಳನ್ನು ತೆರೆಯಲಾಗಿತ್ತು. ಗ್ರಾಮಾಂತರದ ಕಡಬ ಹಾಗೂ ಉಪ್ಪಿನಂಗಡಿ ಮತ್ತು ಪುತ್ತೂರು ನಗರ ವ್ಯಾಪ್ತಿಯ ರೈಲ್ವೇ ನಿಲ್ದಾಣ ಮತ್ತು ಬಸ್ಸು ನಿಲ್ದಾಣದಲ್ಲಿ ಪ್ರತ್ಯೇಕ ಬೂತ್‌ಗಳನ್ನು ತೆರೆಯಲಾಗಿತ್ತು. ಒಂದು ಸಂಚಾರಿ ಬೂತ್ ವ್ಯವಸ್ಥೆಯನ್ನೂ ಮಾಡಲಾಗಿತ್ತು.
ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಂಸದೀಯ ಕಾರ್ಯದರ್ಶಿ ಹಾಗೂ ಪುತ್ತೂರು ಶಾಸಕಿ ಶಕುಂತಳಾ ಟಿ. ಶೆಟ್ಟಿ ಅವರು ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ತಾ.ಪಂ. ಅಧ್ಯಕ್ಷೆ ಭವಾನಿ ಚಿದಾನಂದ, ರೋಟರಿ ಕ್ಲಬ್‌ನ ಚಂದ್ರಹಾಸ ರೈ, ಸುಭಾಶ್ ರೈ, ತಾಲೂಕು ಆರೋಗ್ಯಾಧಿಕಾರಿ ಡಾ| ಅಶೋಕ್ ಕುಮಾರ್, ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ| ಪಿ.ಎಸ್. ವೀಣಾ, ಶುಶ್ರೂಷಕ ಅಧೀಕ್ಷಕಿ ಲೀಲಾವತಿ ಉಪಸ್ಥಿತರಿದ್ದರು. ರೋಟರಿ ಕ್ಲಬ್ ಪುತ್ತೂರು, ರೋಟರ್ಯಾಕ್ಟ್ ಕ್ಲಬ್, ಶಾಲಾ -ಕಾಲೇಜು ಸಂಘಗಳು ಸಹಯೋಗ ನೀಡಿದ್ದವು.
Related Articles
Advertisement