Advertisement
ಪುತ್ತೂರಿನ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ಸುಕೃತೀಂದ್ರ ಸಭಾ ಭವನದಲ್ಲಿ ಜರಗಿದ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ ಆಯೋಜನೆಯ ತಾಳ ಮದ್ದಳೆ ಸಪ್ತಾಹದ ಸಮಾರೋಪದಲ್ಲಿ ಮಾತನಾಡಿದ ಅವರು, ಎಡನೀರು ಮಠದಲ್ಲಿ ಚಾತುರ್ಮಾಸ್ಯ ವ್ರತಾಚರಣೆ ಸಂದರ್ಭ ದಲ್ಲಿ ಹಿಂದಿನಿಂದಲೂ ತಾಳಮದ್ದಳೆ ಆರಾಧನೆಯ ರೂಪದಲ್ಲಿ ನಡೆಯುತ್ತದೆ ಎಂದರು.
ಪದ್ಯಾಣ ಮನೆತನದ ಹಿರಿಯರಾದ ಪುಟ್ಟು ನಾರಾಯಣ ಭಾಗವತರ ಸ್ಮೃತಿಯಲ್ಲಿ ನೀಡುವ ಪದ್ಯಾಣ ಪ್ರಶಸ್ತಿಯನ್ನು ಹಿರಿಯ ಭಾಗವತ ಕುರಿಯ ಗಣಪತಿ ಶಾಸ್ತ್ರಿ ಹಾಗೂ ಕುರಿಯ ವಿಠಲ ಶಾಸ್ತ್ರಿ ನೆನಪಿನ ಕುರಿಯ ಪ್ರಶಸ್ತಿಯನ್ನು ಹಿರಿಯ ಹಿಮ್ಮೇಳ ವಾದಕ ಧರ್ಮಸ್ಥಳದ ಬಿ.ಸೀತಾರಾಮ ತೋಳ್ಪಾಡಿತ್ತಾಯರಿಗೆ ಶ್ರೀಗಳು ಪ್ರದಾನಿಸಿದರು. ಕುರಿಯ ಸ್ಮೃತಿ ಗೌರವವನ್ನು ಯಕ್ಷಗಾನ ಅರ್ಥದಾರಿಗಳಾದ ಕೆ.ಭಾಸ್ಕರ ರಾವ್ ಹಾಗೂ ಭಾಸ್ಕರ ನೂರಿತ್ತಾಯ ಬಾರ್ಯ ಇವರಿಗೆ ನೀಡಲಾಯಿತು. ಪುತ್ತೂರು ಮುಳಿಯ ಜುವೆಲರ್ಸ್ ಆಡಳಿತ ನಿರ್ದೇಶಕ ಮುಳಿಯ ಕೇಶವ ಪ್ರಸಾದ್, ಯಕ್ಷಗಾನ ವಿದ್ವಾಂಸ ಡಾ| ಎಂ. ಪ್ರಭಾಕರ ಜೋಷಿಯವರು ಪ್ರಶಸ್ತಿ ಪುರಸ್ಕೃತರನ್ನು ನುಡಿಹಾರಗಳ ಮೂಲಕ ಗೌರವಿಸಿದರು. ಶೀಲಾ ಗಣಪತಿ ಭಟ್ ಉಪಸ್ಥಿತರಿದ್ದರು.
ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷ ಡಾ| ಟಿ. ಶ್ಯಾಮ ಭಟ್ ಮಾತನಾಡಿ, ಕೀರ್ತಿಶೇಷ ಭಾಗವತ ಪದ್ಯಾಣ ಗಣಪತಿ ಭಟ್ಟರು ಕಾಲಮಿತಿ ಪ್ರದರ್ಶನವನ್ನು ಯಶಸ್ವಿಯಾಗಿ ನಿಭಾಯಿಸಿದವರು. ಪದ್ಯಾಣ ಮತ್ತು ಕುರಿಯ ಮನೆತನಗಳ ಯಕ್ಷಗಾನೀಯ ಕೊಡುಗೆಗಳಲ್ಲಿ ಸಮರ್ಪಣ ಭಾವವಿರುವುದನ್ನು ಕಾಣಬಹುದು ಎಂದರು.
Related Articles
Advertisement
ಕಾರ್ಯಕ್ರಮಕ್ಕೆ ಪುತ್ತೂರು ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿ ಸಹಕಾರ ನೀಡಿತು.
ಪದ್ಯಾಣ ಪ್ರಶಸ್ತಿ ಸಮಿತಿಯ ಸ್ವಸ್ತಿಕ್ ಪದ್ಯಾಣ ವಂದಿಸಿದರು. ಕಲಾವಿದ, ಲೇಖಕ ನಾ. ಕಾರಂತ ಪೆರಾಜೆ ನಿರ್ವಹಿಸಿದರು. ಕೊನೆಯಲ್ಲಿ ಗಂಗಾ ಸಾರಥ್ಯ ಪ್ರಸಂಗದ ತಾಳಮದ್ದಳೆ ನಡೆಯಿತು.