Advertisement
ಸುತ್ತುಗಳ ಆಕರ್ಷಣೆದೇವಾಲಯದಲ್ಲಿ ವಿಶೇಷವಾಗಿ ಮೊದಲಿಗೆ ತಂತ್ರ ಸುತ್ತು, ಅನಂತರ ಉಡಿಕೆ ಸುತ್ತು, ಚೆಂಡೆ ಸುತ್ತಿನ ಬಳಿಕ ವಸಂತ
ಕಟ್ಟೆ ಪೂಜೆ, ಸೇವೆಯ ವಾದ್ಯ ಸುತ್ತುಗಳು, ಶಂಖ, ಜಾಗಟೆ ಸುತ್ತು, ಬ್ಯಾಂಡ್ ವಾಲಗ ಸುತ್ತು ಮತ್ತು ಸರ್ವ ವಾದ್ಯ ಸುತ್ತು ನಡೆಯಿತು. ಬಳಿಕ ಶ್ರೀ ದೇವರು ಒಳಗಾಗಿ ಮಹಾ ಪೂಜೆ ನಡೆದು ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು.
ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸೋಮವಾರ ಬೆಳ್ಳಿ ಮೂಡುವ ಹೊತ್ತಿಗೆ ಶ್ರೀ ದೇವರ ದೀಪ ಬಲಿ ಉತ್ಸವ ನಡೆಯುತ್ತದೆ. ಪ್ರತಿವರ್ಷ ಎ. 16ರಂದು ಸೂರ್ಯೋದಯಕ್ಕೆ ಮೊದಲು ಈ ಉತ್ಸವ ನಡೆಯುತ್ತದೆ. ದೀಪ ಬಲಿ ಉತ್ಸವ ನಡೆಯುವುದರಿಂದ ದೇವಾಲಯದಲ್ಲಿ ಎ. 16ರಂದು ಜಾತ್ರೆ ಪ್ರಯುಕ್ತ ಬೆಳಗಿನ ಉತ್ಸವ ನಡೆಯುವುದಿಲ್ಲ. ವರ್ಷದಲ್ಲಿ ಒಂದು ದಿನ ಮಾತ್ರ ಅಂದರೆ ಜಾತ್ರೆಯ ಸಂದರ್ಭದ ಎ. 16ರಂದು ಮಾತ್ರ ಶ್ರೀ ದೇವರ ದೀಪ ಬಲಿ ಉತ್ಸವ ನಡೆಯುತ್ತದೆ.