Advertisement
ಸೀಮಿತ ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಆಗಮಿಸಿದ್ದು ಕಂಡು ಬಂತು. ಆರೋಗ್ಯ ಸುರಕ್ಷತೆಯ ನಿಟ್ಟಿ ನಲ್ಲಿ ಎಲ್ಲೆಡೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಲಕ್ಷ್ಮೀ ವೆಂಕಟ ರಮಣ ದೇವಾಲಯ, ಉಪ್ಪಿ ನಂಗಡಿ ಸಹಸ್ರಲಿಂಗೇಶ್ವರ ದೇವಾಲಯ, ಕೋಡಿಂಬಾಡಿ ಮಹಿಷಮರ್ದಿನಿ ದೇವಾ ಲಯ, ಸುಳ್ಯ ಚೆನ್ನಕೇಶವ ದೇವಾಲಯ, ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾ ಲಯ, ಪೆರುವಾಜೆ ಶ್ರೀ ಜಲದುರ್ಗಾ ದೇವಾಲಯ, ಬೆಳ್ಳಾರೆ ಮಹಾಲಿಂಗೇಶ್ವರ ದೇವಾ ಲಯ ಸಹಿತ ಹಲವು ದೇವಾಲಯಗಳಲ್ಲಿ ಭಕ್ತರು ದೇವರ ದರ್ಶನ ಪಡೆದರು.
ಉಪ್ಪಿನಂಗಡಿ: ದಕ್ಷಿಣ ಕಾಶಿ, ಗಯಾಪದ ಕ್ಷೇತ್ರವೆಂದು ಪ್ರಸಿದ್ಧಿ ಪಡೆದ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ – ಮಹಾಕಾಳಿ ದೇವಸ್ಥಾನವು ಸೋಮವಾರ ಭಕ್ತರ ಪ್ರವೇಶಕ್ಕೆ ತೆರೆದುಕೊಂಡಿತ್ತಾದರೂ ಶ್ರೀ ದೇವಾಲಯಕ್ಕೆ ಆಗಮಿಸಿದ ಭಕ್ತರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡು ಬಂದಿತ್ತು. ಸರಕಾರದ ನಿಯಮಾವಳಿಯಂತೆ ದೇವಾಲಯದಲ್ಲಿ ಪೂಜೆಯನ್ನು ಬಿಟ್ಟು ಯಾವುದೇ ಸೇವಾದಿಗಳನ್ನು ನಡೆಸಲಿಲ್ಲ.