Advertisement

ಪುತ್ತೂರು: ಹಿಜಾಬ್ ಧರಿಸಿ ಕಾಲೇಜಿಗೆ ಬಂದ 6 ವಿದ್ಯಾರ್ಥಿನಿಯರ ಅಮಾನತು

10:34 AM Jun 02, 2022 | Team Udayavani |

ಪುತ್ತೂರು: ತಾಲೂಕಿನ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿ ಪ್ರಾಂಶುಪಾಲರು ಆದೇಶ ಹೊರಡಿಸಿದ್ದಾರೆ.

Advertisement

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜನಲ್ಲಿ ಘಟನೆ ನಡೆದಿದ್ದು, ಕಾಲೇಜು ಉಪನ್ಯಾಸಕರ ಸಭೆಯ ಒಮ್ಮತದ ತೀರ್ಮಾನದಂತೆ ಅಮಾನತುಗೊಳಿಸಿ ಪ್ರಾಂಶುಪಾಲರು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ:ಎರಡನೇ ಅಭ್ಯರ್ಥಿ ಹಿಂಪಡೆಯಲು ಕಾಂಗ್ರೆಸ್ ನಲ್ಲೇ ಆಗ್ರಹ: ನಾಳೆ ನಾಮಪತ್ರ ವಾಪಾಸ್?

ಕಾಲೇಜಿನಲ್ಲಿ ಒಂದು ಕೋಮಿನ ವಿದ್ಯಾರ್ಥಿನಿಯರನ್ನು ಇನ್ನೊಂದು ಕೋಮಿನ ವಿದ್ಯಾರ್ಥಿಗಳು ಚುಡಾಯಿಸಿದಾಗ ಆಕ್ಷೇಪಿಸಿದ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದ್ದು, ತಕ್ಷಣವೇ ಕಾಲೇಜಿಗೆ ಪೊಲೀಸರು ದೌಡಾಯಿಸಿ ಘರ್ಷಣೆ ನಿರತ ವಿದ್ಯಾರ್ಥಿಗಳನ್ನು ಚದುರಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next