ಪುತ್ತೂರು: ಎಪಿಎಂಸಿ ರಸ್ತೆಯ ಸೂತ್ರಬೆಟ್ಟುವಿನ ಬಾಡಿಗೆ ಮನೆಯೊಂದರಿಂದ ಕಳವು ಮಾಡಿದ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.
ಕೂರ್ನಡ್ಕ ನಿವಾಸಿ ಮಹಮ್ಮದ್ ಮುಸ್ತಫ³ (28), ಸವಣೂರು ಚಾಪಳ್ಳ ನಿವಾಸಿ ಶಮೀರ್(24) ಬಂಧಿತರು. ಬಾಡಿಗೆ ಮನೆ ನಿವಾಸಿ ವಿವೇಕಾನಂದ ಯಾನೆ ಸತ್ಯನಾರಾಯಣ ಅವರು ಜ. 4ರಂದು ಸ್ವಂತ ಊರಾದ ಮಧುರೈಗೆ ಹೋಗಿದ್ದರು.
ಹಾಗಾಗಿ ಅವರ ಅಣ್ಣ ಗೋಪಿನಾಥ ಅವರು ಬಾಡಿಗೆ ಬಿಡಾರಕ್ಕೆ ಬೀಗ ಹಾಕಿ ಒಂದು ಜತೆ ಬೀಗದ ಕೀಯನ್ನು ಮನೆಯ ಹೊರಗಡೆ ನಿಲ್ಲಿಸಿದ್ದ ಮೋಟಾರು ಸೈಕಲ್‌ನ ಬಾಕ್ಸ್ ನಲ್ಲಿಟ್ಟು, ಇನ್ನೊಂದು ಜತೆ ಕೀಯನ್ನು ತೆಗೆದುಕೊಂಡು ಹೋಗಿದ್ದರು.
ಜ.8ರಂದು ಬಿಡಾರಕ್ಕೆ ವಾಪಸ್ ಬಂದು ನೋಡಿದಾಗ ಕಳ್ಳತನ ಬೆಳಕಿಗೆ ಬಂದಿತು. ಬಾಡಿಗೆ ಮನೆಯಿಂದ ಸುಮಾರು 25 ಸಾವಿರ ರೂ. ಮೌಲ್ಯದ ವಿವಿಧ ವಸ್ತುಗಳನ್ನು ಕಳವು ಮಾಡಲಾಗಿತ್ತು.