Advertisement
ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶ ನಾಗೇಶಮೂರ್ತಿ ಮಾಹಿತಿ ನೀಡುವ ವಾಹನಕ್ಕೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿ, ಕೊರೊನಾ ವಿರುದ್ಧ ನಾವೆಲ್ಲರೂ ಜಾಗೃತರಾಗಿ ಸರಕಾರದ ಮುಂಜಾಗ್ರತಾ ಕ್ರಮ ಪಾಲಿಸಿದಲ್ಲಿ ಕೊರೊನಾ ಸೋಂಕು ಹೋಗಲಾಡಿಸಬಹುದು ಎಂದರು.
Related Articles
Advertisement
5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ರುಡೊಲ್ಫ್ ಪಿರೇರಾ ಅವರು ಚಾಲನೆ ನೀಡಿ ಮಾತನಾಡಿ, ಈ ತನಕ ಯಾವುದೇ ಔಷಧ ಇಲ್ಲದೆ ಇರುವ ಕೊರೊನಾಕ್ಕೆ ಮುನ್ನೆಚ್ಚರಿಕಾ ಕ್ರಮಗಳೇ ಔಷಧವಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೊರೊನಾ ವಿರುದ್ಧ ಹೋರಾಟ ಮಾಡಬೇಕಿದೆ. ಇದೀಗ ಜಾಗೃತಿ ಜಾಥಾ ಮೂಲಕ ಜನರಲ್ಲಿ ತಿಳಿವಳಿಕೆ ಮೂಡಿಸುವ ಪರಿಣಾಮಕಾರಿ ಪ್ರಯತ್ನ ಮಾಡಲಾಗುವುದು ಎಂದರು.
ಕರಪತ್ರ ಬಿಡುಗಡೆ ಮಾಡಿದ ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶ, ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಮಂಜುನಾಥ ಮಾತನಾಡಿ, ವೈರಸ್‌ನಿಂದ ರಕ್ಷಿಸಿಕೊಳ್ಳಲು ಸಾಮಾಜಿಕ ಅಂತರ, ಮಾಸ್ಕ್ ಬಳಕೆ, ಸ್ಯಾನಿಟೈಸರ್ ಬಳಕೆ ಮುಂತಾದ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂದರು.
ಪ್ರಧಾನ ವ್ಯವಹಾರಿಕ ನ್ಯಾಯಾಧೀಶ ಪ್ರಕಾಶ್ ಪಿ.ಎಂ. ಮಾಸ್ಕ್ ವಿತರಿಸಿ ಮಾತನಾಡಿದರು. ಮುಖ್ಯಅತಿಥಿಗಳಾಗಿ 2ನೇ ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶ ವೆಂಕಟೇಶನ್ ಎನ್., ಪುತ್ತೂರು ತಹಶೀ ಲ್ದಾರ್ ಟಿ.ರಮೇಶ್ ಬಾಬು, ತಾಲೂಕು ಆರೋಗ್ಯಾಧಿಕಾರಿ ಡಾ| ಅಶೋಕ್‌ಕುಮಾರ್ ರೈ, ವಕೀಲರ ಸಂಘದ ಪ್ರ. ಕಾರ್ಯದರ್ಶಿ ಮಂಜುನಾಥ ಎನ್.ಎಸ್. ಪಾಲ್ಗೊಂಡಿದ್ದರು.
ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ.ಸ್ವಾಗತಿಸಿ, ವಂದಿಸಿ ದರು. ನ್ಯಾಯವಾದಿ ದೀಪಕ್ ಬೊಳು ವಾರು ನಿರೂಪಿಸಿದರು.