Advertisement

ವರ್ಲ್ಡ್ ಟೂರ್‌ ಫೈನಲ್ಸ್‌ಪ್ರಶಸ್ತಿ ಸುತ್ತಿಗೆ ಪಿ.ವಿ. ಸಿಂಧು

09:03 PM Dec 04, 2021 | Team Udayavani |

ಬಾಲಿ (ಇಂಡೋನೇಷ್ಯಾ): ಟೋಕಿಯೊ ಒಲಿಂಪಿಕ್ಸ್‌ ಕಂಚಿನ ಪದಕ ಸಾಧನೆ ಬಳಿಕ ಇತ್ತೀಚೆಗೆ ನಡೆದ ಮಹತ್ವದ ಬ್ಯಾಡ್ಮಿಂಟನ್‌ ಕೂಟದಲ್ಲಿ ಎಡವುತ್ತಿದ್ದ ಭಾರತದ ಪಿ.ವಿ. ಸಿಂಧು, ಬಿಡಬ್ಲ್ಯುಎಫ್ ವರ್ಲ್ಡ್ ಟೂರ್‌ ಫೈನಲ್ಸ್‌ ಕೂಟದ ಪ್ರಶಸ್ತಿ ಸುತ್ತು ಪ್ರವೇಶಿಸಿದ್ದಾರೆ. ಈ ಮೂಲಕ ವರ್ಷಾಂತ್ಯದ ಪ್ರಶಸ್ತಿಯ ನಿರೀಕ್ಷೆ ಮೂಡಿಸಿದ್ದಾರೆ.

Advertisement

ಶನಿವಾರ ನಡೆದ ಮಹಿಳಾ ಸಿಂಗಲ್ಸ್‌ ವಿಭಾಗದ ಸೆಮಿಫೈನಲ್‌ನಲ್ಲಿ ಸಿಂಧು ಜಪಾನಿನ ಅಕಾನೆ ಯಮಾಗುಚಿ ಅವರನ್ನು 21-15, 15-21, 21-19 ಗೇಮ್‌ಗಳ ಅಂತರದಿಂದ ಮಣಿಸಿದರು. ಇವರಿಬ್ಬರ ಹೋರಾಟ ಒಂದು ಗಂಟೆ, 10 ನಿಮಿಷದ ವರಗೆ ಸಾಗಿತು. ರವಿವಾರ ಪ್ರಶಸ್ತಿ ಸುತ್ತಿನ ಕಾಳಗದಲ್ಲಿ ಸಿಂಧು ದಕ್ಷಿಣ ಕೊರಿಯಾದ ಅನ್‌ ಸೆಯಂಗ್‌ ವಿರುದ್ಧ ಸೆಣಸಾಡಲಿದ್ದಾರೆ.

ಸಿಂಧು ಈ ಟೂರ್ನಿಯ ಚೊಚ್ಚಲ ಆವೃತ್ತಿಯಲ್ಲೇ (2018) ಚಾಂಪಿಯನ್‌ ಪಟ್ಟ ಅಲಂಕರಿಸಿದ್ದರು. ಜತೆಗೆ ಈ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಆಟಗಾರ್ತಿ ಎನ್ನುವ ಹಿರಿಮೆಗೂ ಪಾತ್ರರಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next