ಬಳ್ಳಾರಿ: ದೀಪಾವಳಿ ಹಬ್ಬದ ಸಂಭ್ರಮದ ಲಾಭ ಪಡೆದು ಖಾಸಗಿ ಸಾರಿಗೆ ಸಂಸ್ಥೆಗಳು ಪ್ರಯಾಣಿಕರಿಂದ ದುಬಾರಿ ದರ ವಸೂಲಿ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿದ್ದು, ಅವರ ಪರವಾನಿಗೆ ರದ್ದುಪಡಿಸುವುದಾಗಿ ಸಾರಿಗೆ ಸಚಿವ ಬಿ.ಶ್ರೀರಾಮುಲು ಶನಿವಾರ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ : ಭಾರತ್ ಜೋಡೋ ; ಮಾಜಿ ಸೈನಿಕರೊಂದಿಗೆ ರಾಹುಲ್ ಪಾದಯಾತ್ರೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದುಬಾರಿ ದರ ವಸೂಲಿ ಮಾಡುತ್ತಿರುವ ಕುರಿತು ನಿಟ್ಟಿನಲ್ಲಿ ತಪಾಸಣೆ ನಡೆಸಲು ಕಾರ್ಯಪಡೆ ರಚಿಸಲಾಗಿದ್ದು, ಈಗಾಗಲೇ 60 ಉಲ್ಲಂಘನೆ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಹಬ್ಬ ಹರಿದಿನಗಳಲ್ಲಿ ಬಸ್‌ಗಳು, ಆಟೋಗಳು ಮತ್ತು ಇತರ ಪ್ರಯಾಣಿಕ ವಾಹನಗಳಲ್ಲಿ ಪ್ರಯಾಣಿಕರನ್ನು ಕರೆದೊಯ್ಯುವ ನಿರ್ವಾಹಕರು ಹೆಚ್ಚಿನ ಶುಲ್ಕ ವಿಧಿಸುವುದು ಕಂಡುಬಂದರೆ, ಅವರ ಪರ್ಮಿಟ್‌ಗಳನ್ನು ರದ್ದುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈಗಾಗಲೇ ಕಾರ್ಯಪಡೆ ಕಾರ್ಯಾಚರಿಸಿದ್ದು, ಪ್ರಯಾಣಿಕರಿಗೆ ತೊಂದರೆಯಾಗದಂತೆ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. ಕಳೆದ ಬಾರಿ ಸುಮಾರು 110 ಪ್ರಕರಣಗಳು ಉಲ್ಲಂಘನೆಗಾಗಿ ದಾಖಲಾಗಿವೆ ಮತ್ತು ಈಗಾಗಲೇ 60 ಪ್ರಕರಣಗಳನ್ನು ದಾಖಲಿಸಲಾಗಿದೆ. ಇದು ದುಬಾರಿ ದರ ಪಡೆಯುತ್ತಿರುವವರಿಗೆ ಬಲವಾದ ಸಂದೇಶವನ್ನು ರವಾನಿಸುತ್ತದೆ ಎಂದು ಹೇಳಿದರು.