Advertisement
ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಯಾಗಿ ನಾಮಪತ್ರ ಸಲ್ಲಿಸಿರುವ ಮಾಜಿ ಶಾಸಕ ಅಜ್ಜಂಫೀರ್ ಖಾದ್ರಿ ಮನವೊಲಿಸಲು ಸಚಿವ ಜಮೀರ್ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ಖಾನ್ ಪಠಾಣ ಕಾರಿನಲ್ಲಿ ಹುಲಗೂರಿನಲ್ಲಿರುವ ಖಾದ್ರಿ ಅವರ ಮನೆಗೆ ಹೋಗಿದ್ದರು.
ಟಿಕೆಟ್ ಕೈ ತಪ್ಪಿದ್ದರಿಂದ ಆಕ್ರೋಶ ಗೊಂಡಿರುವ ಖಾದ್ರಿ ಬೆಂಬಲಿಗರು ಕಾರಿನ ಮೇಲೆ ಏಕಾಏಕಿ ಕಲ್ಲು ತೂರಾಟ ನಡೆಸಿದ್ದಾರೆ. ಸ್ಥಳೀಯ ಕಾಂಗ್ರೆಸ್ ಮುಖಂಡರು ಜಮೀರ್ ಅವರನ್ನು ಪಾರು ಮಾಡಿ ವಾಪಸ್ ಕಳುಹಿಸಿದರು. 10 ನಿಮಿಷ ಇರುವಾಗ ಓಡಿ ಬಂದು ನಾಮಪತ್ರ ಸಲ್ಲಿಕೆಯಾಸೀರ್ಖಾನ್ ಪಠಾಣ್ಗೆ ಟಿಕೆಟ್ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ಗೆ ಸಂಕಷ್ಟ ಎದುರಾಗಿದೆ. ಟಿಕೆಟ್ ವಂಚಿತರಾದ ಅಜ್ಜಂಪೀರ್ ಖಾದ್ರಿ ಹಾಗೂ ಮಾಜಿ ಸಂಸದ ಮಂಜುನಾಥ ಕುನ್ನೂರ ಕೊನೆ ಕ್ಷಣದಲ್ಲಿ ಬಂಡಾಯ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.
Related Articles
Advertisement