Advertisement

ಚತುಷ್ಕೋನ ಸರಣಿ: ಭಾರತ “ಬಿ’ತಂಡಕ್ಕೆ ಜಯ

10:36 AM Aug 26, 2018 | Harsha Rao |

ಬೆಂಗಳೂರು:  ಮಾಯಾಂಕ್‌ ಅಗರ್ವಾಲ್‌ ಅವರ ಅತ್ಯುತ್ತಮ ಪ್ರದರ್ಶನದಿಂದ ಭಾರತ “ಬಿ’ ತಂಡ ಭರ್ಜರಿ ಗೆಲುವು ಸಾಧಿಸಿದೆ. 

Advertisement

ಇಲ್ಲಿನ ಆಲೂರು ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಚತುಷ್ಕೋನ ಸರಣಿಯ ಪಂದ್ಯದಲ್ಲಿ ಭಾರತ “ಬಿ’ ತಂಡ ಭಾರತ “ಎ’ ವಿರುದ್ಧ ಏಳು ವಿಕೆಟ್‌ಗಳಿಂದ ಜಯಿಸಿದೆ. 

ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡ ಭಾರತ “ಎ’ ತಂಡ 49 ಓವರ್‌ಗಳಲ್ಲಿ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡು 217 ರನ್‌ ಕಲೆಹಾಕಿತ್ತು. ಈ ಮೊತ್ತವನ್ನು ಬೆನ್ನಟ್ಟಿದ ಭಾರತ “ಬಿ’ ತಂಡ 48.1 ಓವರ್‌ಗಳಲ್ಲಿ ಮೂರು ವಿಕೆಟ್‌ ನಷ್ಟಕ್ಕೆ ಸುಲಭವಾಗಿ ಗುರಿ ತಲುಪಿದೆ.

ಭಾರತ “ಬಿ’ ತಂಡದ ಪರ ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ಕರ್ನಾಟಕದ ಮಾಯಾಂಕ್‌ ಅಗರ್ವಾಲ್‌  14 ಬೌಂಡರಿ, 3 ಸಿಕ್ಸರ್‌ ಸಿಡಿಸಿ 124 ರನ್‌ ಗಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next