ಉಡುಪಿ: ಸರಕಾರಿ ಕಾಲೇಜುಗಳಲ್ಲಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸ್ಥಾಪನೆ ವಿ.ವಿ.ಗಳ ಸಹಕಾರ ಅಗತ್ಯ ಎಂದು ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.
ಡಾ| ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಶನಿವಾರ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಬಿ.ಸಿ.ಎ. ಕೋರ್ಸ್ ಮತ್ತು ಪ್ರಯೋಗಾಲಯ ಉದ್ಘಾಟನೆ ಹಾಗೂ ರಸಾಯನಶಾಸ್ತ್ರ ಸ್ನಾತಕೋತ್ತರ ಪ್ರಯೋಗಾಲಯ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉಡುಪಿ ಸರಕಾರಿ ಕಾಲೇಜುಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಯಶಸ್ವಿಯಾಗಿವೆ ಬೆೇರೆ ಬೇರೆ ಜಿಲ್ಲೆಗಳಿಂದ ಶಿಕ್ಷಣಕ್ಕಾಗಿ ಉಡುಪಿ ಬರುತ್ತಿದ್ದಾರೆ. ಈ ನಿಟ್ಟಿನಲ್ಲಿ ವಿವಿಗಳು ಸರಕಾರಿ ಕಾಲೇಜುಗಳಲ್ಲಿ ಕೋರ್ಸ್ ಅನುಮತಿ ನೀಡುವ ಸಂದರ್ಭ ಯಾವುದೇ ರೀತಿಯಾದ ಹಿಂಜರಿಕೆ ಮಾಡುವ ಅಗತ್ಯವಿಲ್ಲ. ಸದ್ಯ ನಗರದಲ್ಲಿ ಮಹಿಳೆಯರ ವಸತಿ ನಿಲಯದ ಕೊರತೆಯಿದೆ. ಮುಂದಿನ ವರ್ಷ ಹೊಸ ಮಹಿಳೆಯರ ವಸತಿ ನಿಲಯ ಪ್ರಾರಂಭಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಬಿ.ಸಿ.ಎ. ಕೋರ್ಸ್ ಮತ್ತು ಪ್ರಯೋಗಾಲಯ ಉದ್ಘಾಟನೆ ಹಾಗೂ ರಸಾಯನಶಾಸ್ತ್ರ ಸ್ನಾತಕೋತ್ತರ ಪ್ರಯೋಗಾಲ ಕಟ್ಟಡ ಶಿಲಾನ್ಯಾಸವನ್ನು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಡಾ| ಜಿ.ಶಂಕರ್ ಅವರು ನೇರವೇರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಉಡುಪಿ ಮತ್ತು ದ.ಕ. ಜಿಲ್ಲಾ ಮೀನುಗಾರಿಕಾ ಮಹಾಮಂಡಳ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ಡಾ| ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಪ್ರಾಂಶುಪಾಲ ಡಾ| ಭಾಸ್ಕರ್ ಅಡಿಗ ಎಸ್. ಉಪಸ್ಥಿತರಿದ್ದರು.
ಗಣಕ ವಿಜ್ಞಾನದ ಮುಖ್ಯಸ್ಥ ರಾಮಚಂದ್ರ ಅಡಿಗ ಜಿ. ಸ್ವಾಗತಿಸಿದರು, ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ಶ್ರೀಧರ್ ಪ್ರಸಾದ ವಂದಿಸಿದರು. ರಾಜ್ಯ ಶಾಸ್ತ್ರದ ಸಹಾಯಕ ಪ್ರಾಧ್ಯಾಪಕ ನಿತ್ಯಾನಂತ ಎನ್. ಕಾರ್ಯಕ್ರಮ ನಿರ್ವಹಿಸಿದರು.