Advertisement

ಗುಣಮಟ್ಟದ ಶಿಕ್ಷಣ ಅಗತ್ಯ

11:46 AM Aug 03, 2017 | |

ಬೆಂಗಳೂರು: ಜಾಗತಿಕ ಮಟ್ಟದ ಸ್ಪರ್ಧೆಗೆ ಅನುಗುಣವಾಗಿ ವಿಶ್ವವಿದ್ಯಾಲಯಗಳು ಶೈಕ್ಷಣಿಕ ಗುಣಮಟ್ಟ ಸುಧಾರಿಸಿಕೊಂಡಾಗ, ವಿದ್ಯಾರ್ಥಿಗಳಿಗೂ ಜಾಗತಿಕವಾಗಿ ಬೆಳೆಯಲು ಪೂರಕವಾಗಲಿದೆ ಎಂದು ರಾಜ್ಯಪಾಲ ವಜುಬಾಯಿ ರೂಢಬಾಯಿ ವಾಲಾ ಅವರು ಹೇಳಿದರು. ರೇವಾ ವಿಶ್ವವಿದ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಎರಡನೇ ಘಟಿಕೋತ್ಸವ ಉದ್ಘಾಟಿಸಿ ಮಾತನಾಡಿದರು.

Advertisement

ದೇಶದಲ್ಲಿ ಶೈಕ್ಷಣಿಕ ಗುಣಮಟ್ಟ ಸುಧಾರಿಸುತ್ತಿದೆ. ತಾಂತ್ರಿಕ ವೈಜ್ಞಾನಿಕ, ಸಂಶೋಧನೆ ಮೊದಲಾದ ವಿಷಯದಲ್ಲಿ ನಾವು ಪ್ರಗತಿ ಸಾಧಿಸುತ್ತಿದ್ದೇವೆ. ದೇಶದ ವಿಶ್ವವಿದ್ಯಾಲಯಗಳು ಜಾಗತಿಕ ಗುಣಮಟ್ಟಕ್ಕೆ ತಕ್ಕಂತೆ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳಿಗೆ ಇದರ ಪೂರ್ಣ ಉಪಯೋಗ ಆಗಲಿದೆ ಎಂದರು.

ದೇಶದ ಕಾಲೇಜು, ವಿಶ್ವವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ತಾಂತ್ರಿಕ ಹಾಗೂ ವೈಜ್ಞಾನಿಕ ಮತ್ತು ಸಂಶೋಧನೆಯ ವಿಷಯದಲ್ಲಿ ದೊಡ್ಡ ಸಾಧನೆಯನ್ನೇ ಮಾಡುತ್ತಿದ್ದಾರೆ. ಶೈಕ್ಷಣಿಕ ಗುಣಮಟ್ಟದ ಆಧಾರದಲ್ಲಿ ಕೌಶಲತೆ ಹೊಂದಿರುವ ಯುವಕರ ಸಂಖ್ಯೆ ಎಷ್ಟಿದೆ ಎಂಬುದನ್ನು ಗಣತಿ ಮಾಡಿದರೆ, ಪ್ರಗತಿಯ ಪ್ರಮಾಣ ಎಷ್ಟಿದೆ ಎಂಬುದನ್ನು ಸುಲಭವಾಗಿ ಅರಿಯಬಹುದು. ಅದರ ಸುಧಾರಣೆಗೆ ಬೇಕಾದ ಕ್ರಮ ತೆಗೆದುಕೊಳ್ಳಬಹುದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಯುವ ಪೀಳಿಗೆ ವಿದ್ಯಾಭ್ಯಾಸ ಪಡೆಯುತ್ತಿರುವಾಗ ಯಾವುದೇ ರೀತಿಯ ವ್ಯಸನಗಳಿಗೂ ಬಲಿಯಾಗಬಾರದು. ಒಮ್ಮೆ ಕೆಟ್ಟ ಚಟಗಳಿಗೆ ಅಂಟಿಕೊಂಡರೆ ಅದರಿಂದ ವಾಪಾಸ್‌ ಬರುವುದು ತುಂಬಾ ಕಷ್ಟ. ಹೀಗಾಗಿ ವಿದ್ಯಾರ್ಥಿ ಜೀವನವನ್ನು ಎಚ್ಚರಿಕೆಯಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಿ ಮುನ್ನೆಡಿಸಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ನೀಡಿದರು.

ರೇವಾ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು, ಪ್ರಾಧ್ಯಾಪಕರು, ಉಪನ್ಯಾಸಕರು ಹಾಗೂ ಶಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next