Advertisement
ಇದಲ್ಲದೆ, ಕಲ್ಯಾಣ ಮಂಟಪ, ಎಲ್ಲ ಹಾಸ್ಟೆಲ್‌ಗಳು, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳ ಹಾಸ್ಟೆಲ್ ಗಳು, ವಿವಿ ಹಾಸ್ಟೆಲ್‌ಗಳಲ್ಲಿ ಕ್ವಾರಂಟೈನ್ ಮಾಡಲು ಅವಕಾಶ ನೀಡಬೇಕು ಎಂದೂ ಸರ್ಕಾರಕ್ಕೆ ಬಿಬಿಎಂಪಿ ಪ್ರಸ್ತಾವನೆ ಸಲ್ಲಿಸಿದೆ. ಹೊರ ರಾಜ್ಯಗಳಿಂದ ಬರುವವರು ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಬೆಂಗಳೂರಿಗೆ ಬರುವವರಿಗೆ ವಸತಿ ವ್ಯವಸ್ಥೆ, ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಆಯುಕ್ತ ಬಿ.ಎಚ್. ಅನಿಲ್ ಕುಮಾರ್ ಬೆಂಗ ಳೂರು ನಗರ ಜಿಲ್ಲಾಧಿಕಾರಿಗಳೊಂದಿಗೆ ಬಿಬಿಎಂಪಿಯ ಕೇಂದ್ರ ಕಚೇರಿಯಲ್ಲಿ ಸೋಮವಾರ ಜಂಟಿ ಸಭೆ ಚರ್ಚೆ ನಡೆಸಿದರು. ನಂತರ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಸದ್ಯ ವಿದೇಶದಿಂದ ಹಾಗೂ ಹೊರರಾಜ್ಯದಿಂದ ಬೆಂಗಳೂರಿಗೆ ಬರುವವರನ್ನು ಹೋಟೆಲ್ ಕ್ವಾರಂಟೈನ್ ಮಾಡಲಾಗುತ್ತಿದೆ.
Related Articles
Advertisement
ಮುಂದಿನ ದಿನಗಳಲ್ಲಿ ಹೊರ ರಾಜ್ಯದಿಂದ ಬರುವವರು ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಬರುವವರ ಸಂಖ್ಯೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಇವರನ್ನೆಲ್ಲ ಕಡ್ಡಾಯವಾಗಿ ಕ್ವಾರಂಟೈನ್ ಮಾಡಬೇಕಾಗುತ್ತದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ರೀತಿ ಆದೇಶ ಮಾಡಿದ್ದಾರೆ ಎಂದು ಬಿಬಿಎಂಪಿಯ ಅಧಿಕಾರಿಗಳು ತಿಳಿಸಿ ದ್ದಾರೆ. ಸಭೆಯಲ್ಲಿ ಬಿಬಿಎಂಪಿಯ ಆರೋಗ್ಯಾಧಿ ಕಾರಿಗಳು, ವಿಶೇಷ ಆಯುಕ್ತರು, ಜಂಟಿ ಆಯುಕ್ತರು ಹಾಗೂ ಕಂದಾಯ ವಿಭಾಗದ ಅಧಿಕಾರಿಗಳು ಹಾಜರಿದ್ದರು.
ಕರ್ತವ್ಯಕ್ಕೆ ಹಾಜರಾಗಲು ಉದ್ಯೋಗಿಗಳಿಗೆ ಸೂಚನೆ: ಒಂದೆಡೆ ಕ್ವಾರಂಟೈನ್ ಹಿನ್ನೆಲೆಯಲ್ಲಿ ಸಾವಿರಾರು ಉದ್ಯೋಗಿಗಳು ತಮ್ಮೂರಿಗೆ ತೆರಳಿದ್ದಾರೆ. ಸಡಿಲಿಕೆ ಹಿನ್ನೆಲೆಯಲ್ಲಿ ಬಹುತೇಕ ಎಲ್ಲ ಸಂಸ್ಥೆಗಳು ಆ ಉದ್ಯೋಗಿಗಳಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಿವೆ. ಈಗಷ್ಟೇ ಆ ಉದ್ಯೋಗಿಗಳು ಹಂತಹಂತವಾಗಿ ಬೆಂಗಳೂರಿಗೆ ವಾಪಸಾಗುತ್ತಿದ್ದಾರೆ. ಈ ನಡುವೆ ಬಂದವರಿಗೆಲ್ಲಾ ಕ್ವಾರಂಟೈನ್ ಕಡ್ಡಾಯಮಾಡುವ ಚಿಂತನೆ ಅವರನ್ನು ಗೊಂದಲಕ್ಕೆ ಸಿಲುಕಿಸಿದೆ.
ಬಾರದಿದ್ದರೆ ಕಂಪೆನಿಗಳು ವೇತನಕ್ಕೆ ಕತ್ತರಿ ಹಾಕುವ ಭೀತಿ, ಇನ್ನೊಂದೆಡೆ ಬಂದರೂ ಕರ್ತವ್ಯಕ್ಕೆ ಹಾಜರಾಗದ ಸ್ಥಿತಿ ಇದೆ. ತುರ್ತು ಕಾರಣಕ್ಕೆ ಊರಿಗೆ ಹೋಗಿ ಮತ್ತೆಬರುವ ಪಾಸ್ ಪಡೆದವರಿಗೂ ಇದು ಅನ್ವಯ ಆಗಲಿದೆಯೇ? ಈ ನಿಯಮ ಯಾವಾಗಿನಿಂದ ಜಾರಿಗೆ ಬರುತ್ತದೆ ಎನ್ನುವುದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಇವೆಲ್ಲ ಗೊಂದಲಗಳಿಗೆ ಮಂಗಳವಾರ ತೆರೆ ಬೀಳುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.