Advertisement
ಕೋವಿಡ್-19 ಬಾಧಿತ ವ್ಯಕ್ತಿ ಎಲ್ಲೆಲ್ಲಿ ಸುತ್ತಾಡಿದ್ದಾರೆ ಎಂಬ ಮಾಹಿತಿಯನ್ನು ಅಧಿಕಾರಿಗಳು ಕಲೆ ಹಾಕುತ್ತಿದ್ದು, ಈಗಾಗಲೇ ಹೊಸಮಠ ಪೇಟೆಯ ದಿನಸಿ ಅಂಗಡಿ ಯೊಂದಕ್ಕೆ ಅವರು ಭೇಟಿ ನೀಡಿದ್ದಾರೆಂಬ ಮಾಹಿತಿ ಮೇರೆಗೆ ಅಲ್ಲಿಗೂ ಅಧಿಕಾರಿಗಳು ತೆರಳಿ ಸೂಕ್ತ ಮುಂಜಾಗ್ರತ ಕ್ರಮಗಳನ್ನು ಸೂಚಿಸಿದ್ದಾರೆ. ಬಲ್ಯ ಗ್ರಾಮದಲ್ಲಿನ ತನ್ನ ಮಾವನ ಮನೆಗೆ ಅವರು ಭೇಟಿ ನೀಡಿದ್ದ ಹಿನ್ನೆಲೆಯಲ್ಲಿ ಆ ಮನೆಯವರನ್ನು ಹಾಗೂ ಸುತ್ತಲಿನ ಮನೆಯವರನ್ನು ಕೂಡ ಹೋಂ ಕ್ವಾರಂಟೈನ್‌ನಲ್ಲಿರುವಂತೆ ಸೂಚಿಸಲಾಗಿದೆ. ಪುತ್ತೂರು ಗ್ರಾಮಾಂತರ ಸರ್ಕಲ್ ಇನ್‌ಸ್ಪೆಕ್ಟರ್ ನಾಗೇಶ್ ಕದ್ರಿ, ಕಡಬ ಎಸ್.ಐ. ರುಕ್ಮ ನಾಯ್ಕ, ವೈದ್ಯಾಧಿಕಾರಿ ಡಾ| ಸುಚಿತ್ರಾ ರಾವ್, ಕಂದಾಯ ನಿರೀಕ್ಷಕ ಅವಿನ್ ರಂಗತ್‌ಮಲೆ, ಪಿಡಿಒ ಚೆನ್ನಪ್ಪ ಗೌಡ, ಆರೋಗ್ಯ ಸಹಾಯಕಿಯರು, ಆಶಾ ಕಾರ್ಯ ಕರ್ತೆಯರು ಉಪಸ್ಥಿತರಿದ್ದರು.
ಕೋವಿಡ್-19 ಬಾಧಿತ ವ್ಯಕ್ತಿಯು ಕೆಲಸದ ನಿಮಿತ್ತ ಜೂ. 2ರಂದು ಕಡಬ ಸಿ.ಎ. ಬ್ಯಾಂಕ್‌ಗೆ ಭೇಟಿ ನೀಡಿದ್ದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿಯು ಬ್ಯಾಂಕ್‌ನ ಚಟುವ ಟಿಕೆಗಳನ್ನು ಸ್ಥಗಿತಗೊಳಿಸಿ ಸ್ವಯಂ ಸೀಲ್‌ಡೌನ್ ಘೋಷಿಸಿಕೊಂಡಿದೆ. ಬ್ಯಾಂಕ್‌ನ ಸಿಬಂದಿ, ಕೆಲವು ನಿರ್ದೇಶಕರು ಹಾಗೂ ನಾನು ಕೂಡ ಸ್ವಯಂ ಆಗಿ ಕ್ವಾರಂಟೈನ್‌ಗೆ ಒಳಗಾಗಿದ್ದೇವೆ. ನಮ್ಮ 3 ಶಾಖೆಗಳನ್ನು ಕೂಡ ಸದ್ಯದ ಮಟ್ಟಿಗೆ ಬಂದ್ ಮಾಡಿದ್ದೇವೆ. ಬ್ಯಾಂಕ್‌ನ ಸಿಸಿ ಟಿವಿ ದೃಶ್ಯಗಳನ್ನು ಪರಿಶೀಲಿಸಿ ಬಾಧಿತ ವ್ಯಕ್ತಿಯು ಬ್ಯಾಂಕ್‌ಗೆ ಭೇಟಿ ನೀಡಿದ್ದ ದಿನ ಬ್ಯಾಂಕ್‌ನಲ್ಲಿದ್ದ ಗ್ರಾಹಕರು, ಸಿಬಂದಿ ಸಹಿತ 170ಕ್ಕೂ ಹೆಚ್ಚು ಜನರ ಪಟ್ಟಿಯನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ನೀಡಲಾಗಿದೆ ಎಂದು ಬ್ಯಾಂಕ್ ಅಧ್ಯಕ್ಷ ರಮೇಶ್ ಕಲ್ಪುರೆ ಅವರು ತಿಳಿಸಿದ್ದಾರೆ.
Related Articles
ಕಡಬ ಗ್ರಾಮದ ನಿವಾಸಿಗೆ ಕೋವಿಡ್-19 ಪತ್ತೆಯಾದ ಹಿನ್ನೆಲೆಯಲ್ಲಿ ಕಡಬ ತಹಶೀಲ್ದಾರ್ ಜಾನ್‌ಪ್ರಕಾಶ್ ರೋಡ್ರಿ ಗಸ್ ಅವರ ನೇತೃತ್ವದಲ್ಲಿ ಶನಿವಾರ ಕಡಬ ಅಂಬೇಡ್ಕರ್ ಭವನದಲ್ಲಿ ಮುಂಜಾಗ್ರತ ಸಭೆ ನಡೆಸಲಾಯಿತು. ಕಡಬ ಪೇಟೆಯಲ್ಲಿ ವ್ಯಾಪಾರ ವ್ಯವಹಾರಗಳುನ್ನು ಈಗಾಗಲೇ ಜಿಲ್ಲಾಡಳಿತ ನಿಗದಿಪಡಿಸಿದ ಸಮಯ ದಂತೆಯೇ ಮುಂದು ವರಿಸುವುದು, ಅಂಗಡಿ ಮುಂಗಟ್ಟುಗಳಲ್ಲಿ ವ್ಯವಹಾರ ನಡೆಸುವ ವೇಳೆ ಗ್ರಾಹಕರು ಸಾಮಾ ಜಿಕ ಅಂತರ ಕಾಯ್ದುಕೊಳ್ಳುವುದು ಇತ್ಯಾದಿ ವಿಚಾರಗಳ ಬಗ್ಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವ ಕುರಿತು ನಿರ್ಣಯಿಸಲಾಯಿತು.
Advertisement
ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್, ಮಾಜಿ ಸದಸ್ಯ ಕೃಷ್ಣ ಶೆಟ್ಟಿ ಕಡಬ, ತಾ.ಪಂ. ಸದಸ್ಯ ಫಝಲ್ ಕೋಡಿಂಬಾಳ, ಗ್ರಾ.ಪಂ. ಅಧ್ಯಕ್ಷ ಬಾಬು ಮುಗೇರ, ಕಡಬ ಎಸ್‌ಐ ರುಕ್ಮ ನಾಯ್ಕ, ವೈದ್ಯಾಧಿಕಾರಿ ಡಾ| ಸುಚಿತ್ರಾ ರಾವ್, ವರ್ತಕ ಸಂಘದ ಅಧ್ಯಕ್ಷ ಶಿವರಾಮ ಎಂ.ಎಸ್. ಉಪಸ್ಥಿತರಿದ್ದರು. ಕಂದಾಯ ನಿರೀಕ್ಷಕ ಅವಿನ್ ರಂಗತ್‌ಮಲೆ ಸ್ವಾಗತಿಸಿ, ನಿರೂಪಿಸಿದರು. ಪಿಡಿಒ ಚೆನ್ನಪ್ಪ ಗೌಡ ವಂದಿಸಿದರು.