Advertisement

ಹೊರಗಿನಿಂದ ಬಂದರೆ ಕ್ವಾರಂಟೈನ್‌ ಕಡ್ಡಾಯ

09:28 AM May 03, 2020 | mahesh |

ಉಡುಪಿ: ಹೊರರಾಜ್ಯ ಮತ್ತು ಜಿಲ್ಲೆಯಿಂದ ಜಿಲ್ಲೆಗೆ ಆಗಮಿಸುವವರು ಕಡ್ಡಾಯವಾಗಿ ಸರಕಾರಿ ಕ್ವಾರಂಟೈನ್‌ಗೆ ಒಳಪಡುವ ಷರತ್ತಿನೊಂದಿಗೆ ಉಡುಪಿ ಜಿಲ್ಲೆ ಪ್ರವೇಶಿಸಲು ಅನುಮತಿ ನೀಡಲಾಗುವುದು ಎಂದು ಜಿಲ್ಲೆಧಿಕಾರಿ ಜಿ. ಜಗದೀಶ್‌ ತಿಳಿಸಿದ್ದಾರೆ.

Advertisement

ಶನಿವಾರ ಜಿ.ಪಂ. ಸಭಾಂಗಣದಲ್ಲಿ ನಡೆದ ಜಿಲ್ಲೆಗೆ ಅಂತರ್‌ ಜಿಲ್ಲೆ/ ರಾಜ್ಯದಿಂದ ಜನರನ್ನು ಕರೆತರುವ ಮತ್ತು ಕಳುಹಿಸಿ ಕೊಡುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಂಜಿಎಂ ಮೈದಾನದಲ್ಲಿ ಪರೀಕ್ಷೆ ಹೊರರಾಜ್ಯದಿಂದ ಆಗಮಿಸುವವರನ್ನು ಉಡುಪಿಯ ಎಂಜಿಎಂ ಮೈದಾನದಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಸಂಬಂಧಪಟ್ಟ ತಾಲೂಕು ಕೇಂದ್ರಗಳಿಗೆ ಕಳುಹಿಸಲಾಗುವುದು ಅಲ್ಲಿ ಸರಕಾರಿ ಕ್ವಾರಂಟೈನ್‌ಗಾಗಿ ವಿವಿಧ ಹಾಸ್ಟೆಲ್‌, ಹೊಟೇಲ್‌ಗ‌ಳನ್ನು ಸಹ ನಿಗದಿಗೊಳಿಸಲಾಗಿದೆ. ಹೊಟೇಲ್‌ಗ‌ಳಲ್ಲಿ ಕ್ವಾರಂಟೈನ್‌ ಆಗುವವವರು ವೆಚ್ಚವನ್ನು ಸ್ವತಃ ಭರಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಗ್ರಾ.ಪಂ.ಗಳಿಗೂ ಸೂಚನೆ
ಜಿಲ್ಲೆಯ ಪ್ರತೀ ಗ್ರಾಮ ಪಂಚಾಯತ್‌ಗಳಲ್ಲಿ ಹೊರ ರಾಜ್ಯದಿಂದ ಬರುವ ಕನಿಷ್ಠ 25 ಜನರನ್ನು ಕ್ವಾರಂಟೈನ್‌ ಮಾಡಲು ಬೇಕಾದ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಎಲ್ಲ ತಾಲೂಕು ಪಂಚಾಯತ್‌ಗಳ ಕಾರ್ಯ ನಿರ್ವಹಣಾಧಿ ಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಜಿಲ್ಲಾ ಪಂಚಾಯತ್‌ ಉಪ ಕಾರ್ಯದರ್ಶಿ ಕಿರಣ್‌ ಪಡೆ°àಕರ್‌ ಉಪಸ್ಥಿತರಿದ್ದರು.

ಮುಖ್ಯಾಂಶಗಳು
ಅಂತರ್‌ ಜಿಲ್ಲಾ ಪ್ರವಾಸಕ್ಕೆ ಅನುಮತಿ ಇಲ್ಲ
 ವೈದ್ಯಕೀಯ ಕಾರಣ ಹೊರತುಪಡಿಸಿ ಇತರ ಕಾರಣಕ್ಕೆ ಪಾಸ್‌ ನೀಡುವುದಿಲ್ಲ,
 ಅಕ್ರಮ ಪ್ರವೇಶಿಸುವವರಿಗೆ ಕಡ್ಡಾಯವಾಗಿ ಸರಕಾರಿ ಕ್ವಾರಂಟೈನ್‌
 ಕ್ವಾರಂಟೈನ್‌ ವೆಚ್ಚವನ್ನು ಸಂಬಂಧಪಟ್ಟವರೇ ಭರಿಸಬೇಕು
 ರಿಕ್ಷಾದಲ್ಲಿ ಒಬ್ಬ ಪ್ರಯಾಣಿಕನಿಗೆ ಮಾತ್ರ ಅವಕಾಶ

Advertisement

Udayavani is now on Telegram. Click here to join our channel and stay updated with the latest news.

Next