Advertisement
ಆದರೆ, ಈ ಪೈಕಿ 800 ಮಂದಿ ಬೆಂಗಳೂರಿಗೆ ಬಂದಿದ್ದು, ಕೇಂದ್ರ ರೈಲ್ವೆ ನಿಲ್ದಾಣದಲ್ಲಿ ಪ್ರತಿಯೊಬ್ಬರ ವೈದ್ಯಕೀಯ ತಪಾಸಣೆ ನಡೆಸಿ 550 ಮಂದಿ ಸ್ವಯಂಪ್ರೇರಿತವಾಗಿ ಕ್ವಾರಂಟೈನ್‌ಗೆ ಹೋಗಲು ನಿರ್ಧರಿಸಿ ಸರ್ಕಾರಿ ಬಸ್ ಹತ್ತಿದ್ದರು. ಆದರೆ, ಸುಮಾರು 150 ಮಂದಿ ಪ್ರಯಾಣಿಕರು ಯಾವುದೇ ಕಾರಣಕ್ಕೂ ಕ್ವಾರಂಟೈನ್‌ಗೆ ಹೋಗುವುದಿಲ್ಲ ಎಂದು ಪಟ್ಟುಹಿಡಿದು ಸ್ಥಳದಲ್ಲೇ ಪ್ರತಿಭಟನೆ ನಡೆಸಿ, ಬಿಬಿಎಂಪಿ, ಆರೋಗ್ಯಾಧಿಕಾರಿಗಳು, ಆರ್ ಪಿಎಫ್ ಅಧಿಕಾರಿಗಳ ಜತೆ ವಾಗ್ವಾದಕ್ಕೀಳಿದರು. ಕೆಲ ಮಹಿಳೆಯರು, ಕ್ವಾರಂಟೈನ್ ಮಾಡಿದರೆ ಮಕ್ಕಳ ಪಾಲನೆಗೆ ತೊಂದರೆ ಆಗುತ್ತದೆ. ಜೀವನ ಕಷ್ಟವಾಗುತ್ತದೆ ಎಂದೆಲ್ಲ ಜಗಳ ಆರಂಭಿಸಿದರು.
Related Articles
Advertisement
ಕ್ವಾರಂಟೈನ್ ಕೇಂದ್ರ ಸ್ಥಾಪನೆಗೆ ವಿರೋಧ: ನಾಗರಬಾವಿಯ ರಾಮಕೃಷ್ಣ ಬಡಾವಣೆಯ ಸಾಮಾಜಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯವನ್ನು ಕ್ವಾರಂಟೈನ್ ಕೇಂದ್ರವಾಗಿ ಪರಿವರ್ತನೆ ಮಾಡುವುದಕ್ಕೆ ಬಡಾವಣೆಯ ಜನ ವಿರೋಧ ವ್ಯಕ್ತಪಡಿಸಿದ್ದು, ಗುರುವಾರ ಪ್ರತಿಭಟನೆ ನಡೆಸಿದರು. ಈ ಭಾಗದಲ್ಲಿ ಕೊರೊನಾ ಸೋಂಕು ದೃಢಪಟ್ಟವರು ಅಥವಾ ಕ್ವಾರಂಟೈನ್‌ನಲ್ಲಿ ಆಗಲಿ ಯಾರು ಇಲ್ಲ. ಇದು ಹಸಿರು ವಲಯದಲ್ಲಿ ಗುರುತಿಸಿಕೊಂಡಿದ್ದು, ಇಲ್ಲಿ ಕ್ವಾರಂಟೈನ್ ಕೇಂದ್ರ ಸ್ಥಾಪನೆಗೆ ಅವಕಾಶ ನೀಡಬಾರದು ಎಂದು ಜನ ಪಟ್ಟುಹಿಡಿದರು.
ಈ ವೇಳೆ ಸ್ಥಳಕ್ಕೆ ಬಂದ ಜ್ಞಾನ ಭಾರತಿ ನಗರ ಪೊಲೀಸರು ವಿದ್ಯಾರ್ಥಿ ನಿಲಯದಲ್ಲಿ ಕ್ವಾರಂಟೈನ್ ಮಾಡುವ ಬಗ್ಗೆ ಇನ್ನು ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ. ಇಲ್ಲಿ ಕ್ವಾರಂಟೈನ್ ಮಾಡಲು ಮುಂದಾದರೆ ಬೇರೆ ಕಡೆ ಸ್ಥಳಾಂತರ ಮಾಡುತ್ತೇವೆ ಎಂದು ಸಾರ್ವಜನಿಕರ ಮನವೊಲಿಸಿದರು. ಹೊರ ರಾಜ್ಯದಿಂದ ಬರುವವರನ್ನು ನಗರದಲ್ಲಿ 14ದಿನಗಳ ಕಾಲ ಕ್ವಾರಂಟೈನ್ ಮಾಡಲು ಸಮುದಾಯ ಭವನ, ಹಾಸ್ಟೆಲ್ ಮತ್ತು ಪೇಯಿಂಗ್ ಗೆಸ್ಟ್ (ಪಿಜಿ) ಗಳನ್ನು ಹುಡುಕಿ ಇಲ್ಲಿ ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ಮತ್ತು ಬಿಬಿಎಂಪಿ ಸಿದಟಛಿತೆ ಮಾಡಿಕೊಳ್ಳುತ್ತಿದ್ದು, ಇದಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ವಿರೋಧಿಸಿದರೆ ಕಾನೂನು ಕ್ರಮ: ನಗರಕ್ಕೆ ಹೊರ ರಾಜ್ಯಗಳಿಂದ ಬರುವವರು ಕಡ್ಡಾಯವಾಗಿ 14 ದಿನಗಳ ಕಾಲ ಕ್ವಾರಂಟೈನ್‌ಗೆ ಒಳಗಾಗಬೇಕು. ಇದಕ್ಕೆ ವಿರೋಧಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್‌ಕುಮಾರ್ ಎಚ್ಚರಿಸಿದ್ದಾರೆ. ಗುರುವಾರ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿ ದವರಲ್ಲಿ ಬಹುತೇಕರು ರಾಜ್ಯ ಸರ್ಕಾರದ ನಿರ್ದೇ ಶನದಂತೆ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಆದರೆ, ಕೆಲವರು ಮನೆಗೆ ಕಳುಹಿಸಿ, ಕ್ವಾರಂಟೈನ್ ಮಾಹಿತಿ ನೀಡಿಲ್ಲ ಎಂದು ದೂರಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆಯನ್ನೂ ಮಾಡಿದ್ದಾರೆ. ಮನೆಗೆ ಹೋಗುವ ಆಸೆಯಿಂದ ಸಮಾಜದ ಹಿತ ಮರೆತು ವರ್ತಿಸುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದರು.