Advertisement
ಕುಂದಾಪುರದ ಪ್ರವಾಸಿ ಬಂಗಲೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ಹೊರ ರಾಜ್ಯಗಳಿಂದ ಬರುವ ನಮ್ಮವರನ್ನು ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ಕೋವಿಡ್-19 ಕುರಿತಾದ ಯಾವುದೇ ಗುಣ ಲಕ್ಷಣಗಳು ಇಲ್ಲದಿದ್ದರೆ ಮಾತ್ರ ಈ ರೀತಿ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗುತ್ತಿದೆ. ಲಕ್ಷಣಗಳಿದ್ದಲ್ಲಿ ಐಸೋಲೇಶನ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುವುದು ಎಂದವರು ಹೇಳಿದರು.
ಇದೇ ವೇಳೆ ಸಚಿವರು ಉಡುಪಿ ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಜಿಲ್ಲೆಯಲ್ಲಿರುವ ಅಸಂಘಟಿತ ವಲಯದ ಕಾರ್ಮಿಕರ ವಿವರ, ಅವರಿಗೆ ಸರಕಾರದಿಂದ ಸಿಗಬೇಕಾದ ಸವಲತ್ತುಗಳನ್ನು ನೀಡುವ ಕುರಿತಂತೆ, ರಿಕ್ಷಾ ಚಾಲಕರಿಗೆ ಸರಕಾರ ಘೋಷಿಸಿದ ಸಹಾಯಧನ ಹಂಚಿಕೆ ಹೇಗೆ ಎನ್ನುವ ಬಗ್ಗೆ ಚರ್ಚಿಸಲಾಯಿತು.