Advertisement

ಸೋಂಕು ಹೆಚ್ಚಿರುವ ದೇಶಗಳಿಂದ ಬರುವವರಿಗೆ ಕ್ವಾರಂಟೈನ್‌ ಕಡ್ಡಾಯ

10:14 PM Nov 20, 2021 | Team Udayavani |

ಬೆಂಗಳೂರು: ಕೊರೊನಾ ಸೋಂಕು ಹೆಚ್ಚಿರುವ ದೇಶಗಳಿಂದ ವಿಮಾನ ನಿಲ್ದಾಣ ಹಾಗೂ ಬಂದರು ಮೂಲಕ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ಕೊರೊನಾ ನೆಗೆಟಿವ್‌ ವರದಿ ಹೊಂದಿದ್ದರೂ ಮತ್ತೂಮ್ಮೆ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ನಡೆಸಬೇಕು ಮತ್ತು ಹೋಂ ಕ್ವಾರಂಟೈನ್‌ಗೆ ಒಳಪಡಿಸಬೇಕು ಎಂದು ಸರಕಾರ ಆದೇಶಿಸಿದೆ.

Advertisement

ಕೊರೊನಾ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದ್ದು, ಎ-ಕೆಟಗರಿಯಲ್ಲಿರುವ 99 ದೇಶಗಳಿಂದ ಬರುವವರಿಗೆ ಎರಡೂ ಡೋಸ್‌ ಲಸಿಕೆ ಪಡೆದಿದ್ದರೆ ಕ್ವಾರಂಟೈನ್‌ನಿಂದ ವಿನಾಯಿತಿ ನೀಡಲಾಗಿದೆ. ಆದರೆ, ಸೋಂಕು ಹೆಚ್ಚು ಎಂದು ಗುರುತಿಸಿರುವ ಯೂರೋಫ್ ರಾಷ್ಟ್ರಗಳು, ದಕ್ಷಿಣ ಆಫ್ರಿಕಾ, ಬ್ರೆಜಿಲ್‌, ಬಾಂಗ್ಲಾದೇಶ, ಬೊಟ್ಸಾನಾ, ಚೀನಾ, ಮ್ಯಾರಿಷಸ್‌, ನ್ಯೂಜಿಲೆಂಡ್‌ನಿಂದ ಬರುವವರು ಆಗಮಿಸುವ 72 ಗಂಟೆಗಳಿಗಿಂತ ಮೊದಲು ಆರ್‌ಟಿ-ಪಿಸಿಆರ್‌ ನೆಗೆಟಿವ್‌ ವರದಿ ಅಪ್‌ಲೋಡ್‌ ಮಾಡಬೇಕು. ಜತೆಗೆ ರಾಜ್ಯಕ್ಕೆ ಆಗಮಿಸಿದ ಬಳಿಕವೂ ಮತ್ತೂಮ್ಮೆ ಪರೀಕ್ಷೆಗೆ ಒಳಪಡಬೇಕು. ನೆಗೆಟಿವ್‌ ಬಂದರೂ 14 ದಿನ ಕಡ್ಡಾಯವಾಗಿ ಹೋಂ ಕ್ವಾರಂಟೈನ್‌ಗೆ ಒಳಪಡಬೇಕು. 8ನೇ ದಿನ ಮತ್ತೂಮ್ಮೆ ಪರೀಕ್ಷೆ ನಡೆಸಬೇಕು ಎಂದು ಸೂಚಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next