Advertisement

ರೈತರ ವಿರುದ್ಧದ ಸುಳ್ಳು ಎಫ್‌ಐಆರ್ ರದ್ದುಗೊಳಿಸಿ:ಪ್ರಧಾನಿಗೆ ವರುಣ್ ಗಾಂಧಿ ಶಾಕ್

12:44 PM Nov 20, 2021 | Team Udayavani |

ನವ ದೆಹಲಿ : ಕೃಷಿ ಕಾಯ್ದೆಗಳನ್ನು ರದ್ದು ಮಾಡಿದ ಬೆನ್ನಲ್ಲೇ ಬಿಜೆಪಿ ಸಂಸದ ವರುಣ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರವೊಂದನ್ನು ಬರೆದಿದ್ದು, ಪ್ರತಿಭಟನಾ ನಿರತ ರೈತರ ವಿರುದ್ಧದ ಎಲ್ಲಾ ರಾಜಕೀಯ ಪ್ರೇರಿತ ಸುಳ್ಳು ಎಫ್‌ಐಆರ್ ಗಳನ್ನು ರದ್ದುಗೊಳಿಸಿ ಎಂದು ಮನವಿ ಮಾಡಿ ಇನ್ನೊಂದು ಶಾಕ್ ನೀಡಿದ್ದಾರೆ.

Advertisement

ಲಖಿಂಪುರ ಖೇರಿ ಘಟನೆ ಪ್ರಜಾಪ್ರಭುತ್ವಕ್ಕೆ ಕಳಂಕವಾಗಿದ್ದು, ಈ ಸಂಬಂಧ ಕೇಂದ್ರ ಸಚಿವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದೂ ವರುಣ್ ಪತ್ರದಲ್ಲಿ ಬರೆದಿದ್ದಾರೆ.

ರಾಷ್ಟ್ರದ ಹಿತದೃಷ್ಟಿಯಿಂದ ಕನಿಷ್ಠ ಬೆಂಬಲ ಬೆಲೆಯ ಶಾಸನಬದ್ಧ ಖಾತರಿಯ ರೈತರ ಬೇಡಿಕೆಯನ್ನು ಸರ್ಕಾರ ಈಡೇರಿಸಬೇಕು ಎಂದು ಪತ್ರದಲ್ಲಿ ಬರೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next