ಕಿರುತೆರೆ ಹಾಗೂ ಹಿರಿತೆರೆ ಮಹಿಳೆಯರಿಗಾಗಿ ಕ್ವೀನ್ ಪ್ರೀಮಿಯರ್ ಲೀಗ್ ಎಂಬ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ. ಕ್ರಿಯೇಟಿವ್ ಫ್ರೆಂಡ್ಸ್ ಕಂಪೆನಿ ಹೀಗೊಂದು ವೇದಿಕೆ ಕಲ್ಪಿಸಿದೆ.
ಈ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕನ್ನಡ ಸಿನಿಮಾ, ಸೀರಿಯಲ್, ಆ್ಯಂಕರ್, ಮಾಡೆಲ್‌ಗಳು ಭಾಗವಹಿಸಲು ವೇದಿಕೆ ಕಲ್ಪಿಸಿಕೊಡಲಾಗಿದೆ. ಅದರ ಭಾಗವಾಗಿ “ಕ್ಯುಪಿಎಲ್’ ಲೋಗೋ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಕಾರ್ಯಕ್ರಮದಲ್ಲಿ ಕರವೇ ಅಧ್ಯಕ್ಷ ನಾರಾಯಣ ಗೌಡ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಂಎನ್ ಸುರೇಶ್, ಉದ್ಯಮಿ ಪೂರ್ವಂಕರ್, ಸಿಇಒ ಮಲ್ಲಣ್ಣ, ಅಂತರಾಷ್ಟ್ರೀಯ ಕ್ರೀಡಾಪಟು ವೃಂದಾ ದಿನೇಶ್, ಮಹಿಳಾ ಕ್ರಿಕೆಟರ್‌ಗಳಾದ ಪುಷ್ಪ ಕುಮಾರಿ, ಪ್ರತ್ಯುಷ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಲೋಗೋ ಬಿಡುಗಡೆ ಮಾಡಿದ ಪುಷ್ಪಕುಮಾರಿ, ಕ್ರಿಕೆಟ್ ಹುಡುಗರಿಗೆ ಮಾತ್ರ ಎನ್ನುವ ಕಾಲವಿತ್ತು. ಆದರೆ ನಾವು ಅಂದು ಛಲ ಬಿಡದೆ ಆಡಿದ್ದೇವೆ. ಮಹಿಳೆಯರಿಗಾಗಿ ಈ ರೀತಿ ಕ್ರಿಕೆಟ್ ಪಂದ್ಯಾವಳಿ ನಡೆಸುತ್ತಿರುವುದು ಖುಷಿ ಎಂದರು.
ಮೆಂಟರ್ ಆಗಿರುವ ಪ್ರಮೋದ್ ಶೆಟ್ಟಿ ಮಾತನಾಡಿ, ಜೂನ್ ತಿಂಗಳಲ್ಲಿ ಕ್ವಿಪಿಎಲ್ ಪಂದ್ಯಾವಳಿ ನಡೆಸಲು ಯೋಜನೆ ಹಾಕಿಕೊಂಡಿದ್ದೇವೆ ಎಂದರು. ಕ್ವೀನ್ ಪ್ರೀಮಿಯರ್ ಲೀಗ್ ಆಯೋಜಕರ ಬಳಗದಲ್ಲಿ ಮಹೇಶ್ ಕುಮಾರ್, ಪ್ರಮೋದ್ ಶೆಟ್ಟಿ, ಭವ್ಯ ಗೌಡ, ಸಾತ್ವಿಕ್, ಸಂತೋಷ್, ಚೇತನ್, ಸಚಿನ್ ಹಾಗೂ ಪ್ರೇಮ್ ಇದ್ದಾರೆ.