Advertisement
ನೂತನ ವರ್ಷಾಚರಣೆಗೆ ಅವಕಾಶ ಕುರಿತು ಸುದ್ದಿಗಾರರ ಜತೆ ಮಾತನಾಡಿದ ಪಾಲಿಕೆ ಆಯುಕ್ತ ಗೌರವ್‌ಗುಪ್ತಾ, ಮುಂದಿನ ನಾಲ್ಕೈದು ದಿನಗಳಲ್ಲಿ ಈ ಬಗ್ಗೆ ಒಂದು ಚಿತ್ರಣ ದೊರೆಯಲಿದೆ. ಹೀಗಾಗಿ ಹೊಸ ವರ್ಷ ಸಂಭ್ರಮಾಚರಣೆ ಅನುವು ನೀಡಬೇಕೆ ಅಥವಾ ಬೇಡವೆ ಎಂಬ ಬಗ್ಗೆ ಆಲೋ ಚನೆ ಮಾಡಿಲ್ಲ.
Related Articles
Advertisement
ಈಗಾಗಲೇ ಪಾಸಿಟಿವ್ ವರದಿ ಬಂದವರ ಸಂಪರ್ಕದಲ್ಲಿದ್ದವರನ್ನು ಪತ್ತೆ ಹಚ್ಚುವ ಕೆಲಸವಾಗುತ್ತಿದೆ. ಸರ್ಕಾರದ ಮಾರ್ಗ ಸೂಚಿಯಂ ತೆಯೇ ಕಾರ್ಯ ನಡೆಯುತ್ತಿದೆ ಎಂದರು.
ವಿದೇಶಿಗರ ಮೇಲೆ ನಿಗಾ: ಒಮಿಕ್ರಾನ್ ಹೊಸರೂಪಾಂತರ ತಳಿಯ ಹಿನ್ನೆಲೆಯಲ್ಲಿ ವಿದೇಶದಿಂದ ಬರುವವರ ಮೇಲೆ ತೀವ್ರ ನಿಗಾವಹಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳು ಪರಿಸ್ಥಿಯ ಮೇಲೆ ಗಮನಹರಿಸಿದ್ದಾರೆ. ಜತೆಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಯಾರು ಯಾರು ಬರುತ್ತಾರೋ ಅವರನ್ನು ಪರೀಕ್ಷಿಸುವ ಕಾರ್ಯ ಕೂಡ ನಡೆದಿದೆ ಎಂದು ಹೇಳಿದರು.
ಇದನ್ನೂ ಓದಿ;- ಕಾಂಗ್ರೆಸ್ ಜಾತಿಯ ಟ್ರಂಪ್ ಕಾರ್ಡ್ ಬಳಸಿ ಮತ ಕೇಳುತ್ತಿದ್ದಾರೆ: ಬನಹಟ್ಟಿ
ವಿದೇಶದಿಂದ ಬರುವಂತಹ ಪ್ರಯಾಣಿಕರ ವರದಿ ನೆಗೆಟಿವ್ ಬಂದರೆ ಗಂಟಲು ದ್ರಾವಣ ಪರೀಕ್ಷೆ ಕೂಡ ಮಾಡಲಾಗುತ್ತದೆ. ಈಗಾಗಲೇ ದಕ್ಷಿಣ ಆಫ್ರಿಕಾದಿಂದ ಬಂದವರ ಗಂಟಲು ದ್ರಾವಣ ಪರೀಕ್ಷೆ ನಡೆಯುತ್ತಿದೆ ಎಂದು ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಜ್ಞರ ತಂಡದೊಂದಿಗೆ ಸಭೆ ನಡೆಸಿದ್ದಾರೆ ಎಂದು ಹೇಳಿದರು.
ಅಖಾಡಕ್ಕೆ ಇಳಿದ ಮಾರ್ಷಲ್‌ಗಳು
ಒಮಿಕ್ರಾನ್ ಹಿನ್ನೆಲೆಯಲ್ಲಿ ಸರ್ಕಾರ ಕೆಲವೊಂದು ಮಾರ್ಗ ಸೂಚನೆ ನೀಡಿದ್ದು ಅದೇ ರೀತಿಯಲ್ಲೆ ಬಿಬಿಎಂಪಿ ಕೂಡ ಕಾರ್ಯ ನಿರ್ವಹಿಸುತ್ತಿದೆ. ಭಾನುವಾರ ಕೆ.ಆರ್. ಮಾರುಕಟ್ಟೆ ಸೇರಿದಂತೆ ಇನ್ನಿತರ ಜನನಿಬಿಡ ಪ್ರದೇಶದಲ್ಲಿ ಧ್ವನಿವರ್ಧಕ ಮೂಲಕ ಸಾರ್ವಜನಿಕರಿಗೆ ಮಾಸ್ಕ್ ಧರಿಸುವ ಬಗ್ಗೆ ಮತ್ತು ಅಂತರ ಕಾಯ್ದು ಕೊಳ್ಳುವ ಮೂಲಕ ತಿಳಿವಳಿಕೆ ನೀಡಿದ್ದ ಮಾರ್ಷಲ್‌ಗಳು ಸೋಮವಾರ ಅಖಾಡಕ್ಕಿಳಿದರು. ಕೆಂಪೇಗೌಡ ಬಸ್ ನಿಲ್ದಾಣ, ಸಿಟಿ ರೈಲ್ವೆ ನಿಲ್ದಾಣ ಮತ್ತು ಕೆ.ಆರ್.ಮಾರುಕಟ್ಟೆ ಪ್ರದೇಶದಲ್ಲಿ ಮಾಸ್ಕ್ ಧರಿಸದ ಜನರಿಗೆ ದಂಡ ಹಾಕಿದರು.
ರೈಲ್ವೆ ನಿಲ್ದಾಣದಲ್ಲಿ ಕೋವಿಡ್ ಟೆಸ್ಟ್
ಐರೋಪ್ಯಾ ರಾಷ್ಟ್ರಗಳಲ್ಲಿ ಕಂಡುಬಂದಿರು ಒಮಿಕ್ರಾನ್ ಹೊಸ ರೂಪಾಂತರ ತಳಿಯ ಬಗ್ಗೆ ಎಚ್ಚೆತ್ತುಕೊಂಡಿ ರುವ ಬಿಬಿಎಂಪಿ ರೈಲ್ವೆ ನಿಲ್ದಾಣ ಸೇರಿದಂತೆ ಇನ್ನಿತರ ಸ್ಥಳಗಳಲ್ಲಿ ಕೋವಿಡ್ ಟೆಸ್ಟ್ ಅನ್ನು ಆರಂಭಿಸಿದೆ.
ಸೋಮವಾರ ನಗರದ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಸಿಟಿ ರೈಲ್ವೆ ನಿಲ್ದಾಣದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಹಲವು ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಮಾಡಿದರು. ಒಕ್ರಾಮಿನ್ ರೂಪಾಂತರ ತಳಿಯ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮತ್ತು ಕೇರಳದಿಂದ ಆಗಮಿಸುತ್ತಿರುವ ಜನರ ಮೇಲೆ ಹೆಚ್ಚಿನ ನಿಗಾಯಿರಿಸಲಾಗಿದೆ.