Advertisement

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

10:51 PM Apr 25, 2024 | Team Udayavani |

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ 2015-16ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ 15 ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ 1ನೇ ಸಿಸಿಎಚ್‌ ನ್ಯಾಯಾಲಯದ ತೀರ್ಪು ನೀಡಿದೆ.

Advertisement

ಪ್ರಕರಣ ಸಂಬಂಧ ಸುದೀರ್ಘ‌ ವಿಚಾರಣೆ ನಡೆಸಿ ಕಾದಿರಿಸಿದ್ದ ತೀರ್ಪನ್ನು ನ್ಯಾಯಾಧೀಶರಾದ ಮುರಳೀಧರ ಪೈ ಗುರುವಾರ ಪ್ರಕಟಿಸಿದ್ದಾರೆ. ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ ಎಂದು ತೀರ್ಪಿನಲ್ಲಿ ಉಲ್ಲೇಖೀಸಲಾಗಿದೆ.

ಪ್ರಕರಣದಲ್ಲಿ ಕಿಂಗ್‌ಪಿನ್‌ ಶಿವಕುಮಾರಯ್ಯ ಅಲಿಯಾಸ್‌ ಗುರೂಜಿ ಸಹಿತ 19 ಮಂದಿ ಆರೋಪಿಗಳಿದ್ದರು. ಈ ಪೈಕಿ ವಿಚಾರಣೆ ಹಂತದಲ್ಲಿಯೇ ಆರೋಪಿಗಳಾಗಿದ್ದ ಓಬಳರಾಜು, ರುದ್ರಪ್ಪ ಮತ್ತು ರಂಗನಾಥ್‌ ವಿರುದ್ಧ ಆರೋಪಗಳನ್ನು ಕೈ ಬಿಡಲಾಗಿತ್ತು. 2ನೇ ಆರೋಪಿ ಶಿವಕುಮಾರಯ್ಯ ಅಲಿಯಾಸ್‌ ಗುರೂಜಿ ವಿಚಾರಣ  ಹಂತದಲ್ಲಿಯೇ ಮೃತಪಟ್ಟಿದ್ದ. ಹೀಗಾಗಿ ಅವರ ವಿರುದ್ಧದ ಪ್ರಕರಣವನ್ನು ಮುಕ್ತಾಯಗೊಳಿಸಿತ್ತು. ಉಳಿದಂತೆ ಕುಮಾರಸ್ವಾಮಿ, ಈರಮಲ್ಲಯ್ಯ, ಸಂತೋಷ್‌ ಅಗಸಿಮನಿ, ಕೆಂ.ಎಂ. ಮುರಳೀಧರ ಮತ್ತು ಅನಿಲ್‌ ಕುಮಾರ್‌ ಸಹಿತ 15 ಮಂದಿಯನ್ನು ಖುಲಾಸೆಗೊಳಿಸಿ ಇದೀಗ ತೀರ್ಪು ಪ್ರಕಟಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next