Advertisement

ತುಳು ಭವನ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಕ್ರಮ: ಖಾದರ್ 

12:48 PM Sep 27, 2018 | Team Udayavani |

ಮಹಾನಗರ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ತುಳು ಭವನ ಕಟ್ಟಡದ ಬಾಕಿ ಉಳಿದಿರುವ ಕಾಮಗಾರಿ ಹಾಗೂ ಯೋಜನೆಯನ್ನು ಶೀಘ್ರವಾಗಿ ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಸರಕಾರದಿಂದ ಆಗಬೇಕಾದ ಕೆಲಸಗಳನ್ನು ಮಾಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ಭರವಸೆ ನೀಡಿದರು.

Advertisement

ನಗರದ ಉರ್ವಸ್ಟೋರ್‌ ಬಳಿ ಇರುವ ತುಳು ಭವನಕ್ಕೆ ಬುಧವಾರ ಭೇಟಿ ನೀಡಿದ ಅವರು ತುಳು ಭವನದಲ್ಲಿ ಇದುವರೆಗೆ ನಡೆದಿರುವ ಕಾಮಗಾರಿಯನ್ನು ಪರಿಶೀಲಿಸಿದರು. ಬಾಕಿ ಉಳಿದಿರುವ ಕಾಮಗಾರಿಯ ಬಗ್ಗೆ ಅಕಾಡೆಮಿ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಬಾಕಿ ಅನುದಾನ
ಬಿಡುಗಡೆಗೆ ಶೀಘ್ರ ಕ್ರಮ ಇದೇ ವೇಳೆ ಮಾತನಾಡಿದ ಖಾದರ್‌, ತುಳು ಭವನದಲ್ಲಿ ಪೂರ್ಣಗೊಳ್ಳಬೇಕಾಗಿರುವ ದೊಡ್ಡ ಸಭಾಂಗಣ, ಆರ್ಟ್‌ ಗ್ಯಾಲರಿ , ಮ್ಯೂಸಿಯಂ, ಲಿಫ್ಟ್‌ ನಿರ್ಮಾಣ ಕಾಮಗಾರಿಗೆ ಲೋಕೋಪಯೋಗಿ ಇಲಾಖೆ ನೀಡಿರುವ ಅಂದಾಜು ಪಟ್ಟಿಯಂತೆ ಅವಶ್ಯ ಇರುವ 3.6 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲು ತಕ್ಷಣವೇ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಪದವಿಪೂರ್ವ ಶಿಕ್ಷಣದಲ್ಲಿ ತುಳು ಪಠ್ಯವನ್ನು ಜಾರಿಗೆ ತರುವ ನಿಟ್ಟಿನಲ್ಲಿ ಅಕಾಡೆಮಿ ಸಲ್ಲಿಸಿರುವ ಬೇಡಿಕೆಗೆ ಸ್ಪಂದಿಸಲಾಗುವುದು. ಈ ನಿಟ್ಟಿನಲ್ಲಿ ಶಿಕ್ಷಣ ಸಚಿವರು ಹಾಗೂ ಮುಖ್ಯಮಂತ್ರಿ ಅವರೊಂದಿಗೆ ಸಮಾಲೋಚನೆ ನಡೆಸುವುದಾಗಿ ಹೇಳಿದರು.

ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ, ಸದಸ್ಯರಾದ ತಾರಾನಾಥ್‌ ಗಟ್ಟಿ ಕಾಪಿಕಾಡ್‌, ಬೆನೆಟ್‌ ಅಮ್ಮನ್ನ, ಅಕಾಡೆಮಿ ರಿಜಿಸ್ಟ್ರಾರ್‌ ಚಂದ್ರಹಾಸ ರೈ ಬಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್‌ ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next