Advertisement

ಅರ್ಚಕರಿಗೆ, ದೇಗುಲ ನೌಕಕರಿಗೆ ಆರೋಗ್ಯ ವಿಮೆ ಜಾರಿಗೆ ಶೀಘ್ರ ಕ್ರಮ: ಶಶಿಕಲಾ ಜೊಲ್ಲೆ

02:27 PM Sep 23, 2021 | Team Udayavani |

ಬೆಂಗಳೂರು: ಮುಜರಾಯಿ ಇಲಾಖೆಯ ಆಡಳಿತ ಯಂತ್ರ ಚುರುಕುಗೊಳಿಸಲು ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆಯವರು ಮುಂದಾಗಿದ್ದಾರೆ.

Advertisement

ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಇಲಾಖೆಯ ಕಾರ್ಯ ಚಟುವಟಿಕೆಗಳಿಗೆ ವೇಗ ಹೆಚ್ಚಿಸಿ, ತ್ವರಿತಗತಿಯಲ್ಲಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸುವ ಅರ್ಚಕರು ಹಾಗೂ ದೇವಾಲಯ ನೌಕರರು ಆರೋಗ್ಯ ಸಮಸ್ಯೆಗೆ ಒಳಗಾದರೆ ಅವರಿಗೆ ರಕ್ಷಣೆ ಒದಗಿಸಲು ಆರೋಗ್ಯ ವಿಮೆ ಜಾರಿಗೊಳಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದ್ದು, ಈ ಕುರಿತು ಶೀಘ್ರ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಇದರಿಂದ ಮುಜರಾಯಿ ಇಲಾಖೆಯ ಸುಮಾರು 37,000 ಸಿಬ್ಬಂದಿಗೆ ಪ್ರಯೋಜನವಾಗಲಿದೆ. ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಧಾರ್ಮಿಕ ಸಂಸ್ಥೆಗಳಲ್ಲಿ ಈಗಾಗಲೇ 5 ನೇ ವೇತನ ಆಯೋಗದ ವೇತನ ಪಡೆದು ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ಹಾಗೂ ಅರ್ಚಕರಿಗೆ 6 ನೇ ವೇತನ ಆಯೋಗದ ವೇತನ ದೊರಕಿಸಿಕೊಡುವಂತೆ ಅನೇಕ ಶಾಸಕರಿಂದ ಹಲವಾರು ಬಾರಿ ಒತ್ತಡ ಬಂದಿರುವುದರಿಂದ ಕೆಲವು ಷರತ್ತುಗಳನ್ನು ವಿಧಿಸಿ, ದೇವಾಲಯದ ವಾರ್ಷಿಕ ಆದಾಯದಲ್ಲಿ ನೌಕರರ ವೇತನ ಶೇ 35% ರಷ್ಟು ಮೀರದಂತೆ ನೌಕರರನ್ನು 6 ನೇ ವೇತನ ಆಯೋಗದ ವ್ಯಾಪ್ತಿಗೆ ಒಳಪಡುವಂತೆ ಕ್ರಮ ಕೈಗೊಳ್ಳಲಾಗುತ್ತದೆ. ಇದರಿಂದ ಮುಜರಾಯಿ ಇಲಾಖೆಯ ಸುಮಾರು 1034 ಸಿಬ್ಬಂದಿಗೆ ಪ್ರಯೋಜನವಾಗಲಿದೆ ಎಂದರು.

ಇದನ್ನೂ ಓದಿ:ದೇಶದಲ್ಲೇ ಮೂರು ಕೈಗಾರಿಕಾ ಕಾರಿಡಾರ್ ಗಳನ್ನು ಹೊಂದಿದ ಏಕೈಕ ರಾಜ್ಯ ಕರ್ನಾಟಕ: ಸಚಿವ ನಿರಾಣಿ

ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ರಾಜ್ಯದ ಎಲ್ಲ ದೇವಸ್ಥಾನಗಳ ಆಸ್ತಿ, ಮಾರ್ಗ ನಕ್ಷೆ, ಅಲ್ಲಿನ ಸೇವೆಗಳ ಸಂಪೂರ್ಣ ಮಾಹಿತಿಯನ್ನು ಆನ್ ಲೈನ್ ಮೂಲಕ ತಿಳಿದುಕೊಳ್ಳುವಂತೆ ಐಟಿಎಂಎಸ್ (ಇಂಟಿಗ್ರೆಟೆಡ್ ಟೆಂಪಲ್ ಮ್ಯಾನೇಜ್ ಮೆಂಟ್ ಸಿಸ್ಟಮ್) ಜಾರಿಗೆ ಕ್ರಮ ವಹಿಸುವುದಾಗಿ ಸಚಿವರು ತಿಳಿಸಿದರು.

Advertisement

ಇದರಿಂದ ರಾಜ್ಯದ ದೇವಾಲಯಗಳ ಮಾಹಿತಿ ಒಂದೆಡೆ ದೊರೆಯುವುದರಿಂದ ದೇಶ-ವಿದೇಶಗಳಿಂದ ಬರುವ ಭಕ್ತಾಧಿಗಳಿಗೆ ಅನುಕೂಲವಾಗಲಿದೆ. ದೇವಾಲಯಗಳ ಆದಾಯ ವೃದ್ಧಿಗೂ ಇದು ಪೂರಕವಾಗಲಿದೆ ಎಂದು ಶಶಿಕಲಾ ಜೊಲ್ಲೆ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next