Advertisement

ಶೀಘ್ರ 16 ಸಾವಿರ ಶಿಕ್ಷಕರ ನೇಮಕ 

06:30 AM Jun 26, 2018 | Team Udayavani |

ಧಾರವಾಡ: ರಾಜ್ಯದಲ್ಲಿ 26 ಸಾವಿರ ಶಿಕ್ಷಕರ ಹುದ್ದೆ ಖಾಲಿ ಇದ್ದು, ಈಗಾಗಲೇ 10 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆ ಪ್ರಾರಂಭವಾಗಿದೆ. ಇನ್ನುಳಿದ ಹುದ್ದೆಗಳನ್ನೂ ಭರ್ತಿ ಮಾಡಲು ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಎನ್‌. ಮಹೇಶ್‌ ತಿಳಿಸಿದರು.

Advertisement

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಇಟಿ ಫ‌ಲಿತಾಂಶ ಬಿಡುಗಡೆ ಸಂದರ್ಭದಲ್ಲಿ ಆನ್‌ಲೈನ್‌ನಲ್ಲಿ ತಾಂತ್ರಿಕ ದೋಷಗಳು ಎದುರಾದ ಕಾರಣ ಕೆಲ ಸಮಸ್ಯೆಗಳು ಉದ್ಭವಿಸಿವೆ. ಆದಷ್ಟು ಶೀಘ್ರದಲ್ಲಿ ಎಲ್ಲ ಸಮಸ್ಯೆಗಳನ್ನು ಪರಿಹರಿಸಲಾಗುವುದು. 

ಶಾಲೆಗಳ ಕಟ್ಟಡ ದುರಸ್ತಿ ಸಮಸ್ಯೆ ಎಲ್ಲ ಕಡೆಗಳಲ್ಲೂ ಇದೆ. ಹೀಗಾಗಿ ಸರ್ಕಾರಿ ಹಾಗೂ ಖಾಸಗಿ ಕಂಪನಿಗಳ ಅನುದಾನದಲ್ಲಿ ರಾಜ್ಯದ ಎಲ್ಲ ಶಾಲೆಗಳ ಕಟ್ಟಡ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು. ಶಿಕ್ಷಕರು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷೆ ನೀಡುವಂತಿಲ್ಲ. ಒಂದು ವೇಳೆ ಮಕ್ಕಳಿಗೆ ಕಠಿಣ ಶಿಕ್ಷೆ ನೀಡಿದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next