Advertisement

ಗೋವಿಂದರಾಜನಗರಕ್ಕೆ ಶೀಘ್ರ ಅಭ್ಯರ್ಥಿ ಪ್ರಕಟ

12:15 PM Oct 16, 2017 | Team Udayavani |

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಿಟ್ಟುಕೊಟ್ಟಿದ್ದ ಗೋವಿಂದರಾಜನಗರ ಕ್ಷೇತ್ರವನ್ನು ಈ ಬಾರಿ ಮತ್ತೆ ಬಿಜೆಪಿ ತೆಕ್ಕೆಗೆ ಸೆಳೆದುಕೊಳ್ಳುವ ನಿಟ್ಟಿನಲ್ಲಿ ಕೆಲವೇ ದಿನಗಳಲ್ಲಿ ಕ್ಷೇತ್ರಕ್ಕೆ ಪಕ್ಷದ ಅಭ್ಯರ್ಥಿ ಹೆಸರು ಪ್ರಕಟಿಸುವುದಾಗಿ ಕೇಂದ್ರ ಸಚಿವ ಅನಂತಕುಮಾರ್‌ ಹೇಳಿದ್ದಾರೆ.

Advertisement

ಗೋವಿಂದರಾಜನಗರ ಕ್ಷೇತ್ರದಲ್ಲಿ ಭಾನುವಾರ ಬಿಜೆಪಿ ಕಚೇರಿ ಉದ್ಘಾಟಿಸಿದ ಮಾತನಾಡಿದ ಅವರು, ಈ ಕ್ಷೇತ್ರ ಬಿಜೆಪಿ ಸಂಸದರ ವ್ಯಾಪ್ತಿಗೆ ಬರುತ್ತದೆ. ಇರುವ ಬಹುತೇಕ ಕಾರ್ಪೊರೇಟರ್‌ಗಳು ಬಿಜೆಪಿಗೆ ಸೇರಿದವರು. ಅಭಿವೃದ್ಧಿ ಕಾರ್ಯಗಳನ್ನು ಚುರುಕುಗೊಳಿಸಲು ಕ್ಷೇತ್ರದಲ್ಲಿ ಪಕ್ಷದ ಶಾಸಕರೂ ಇರಬೇಕಾದ ಅಗತ್ಯವಿದೆ.

ಹೀಗಾಗಿ ಕಾಂಗ್ರೆಸ್‌ ಶಾಸಕರನ್ನು ಸೋಲಿಸಲು ಸಿದ್ಧತೆ ನಡೆಸುವ ಉದ್ದೇಶದಿಂದ ಶೀಘ್ರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗುವುದು ಎಂದು ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಿಡಿ ಕಾರಿದ ಕೇಂದ್ರ ಸಚಿವರು, ಮಳೆ ಸಂದರ್ಭದಲ್ಲಿ ಸರ್ಕಾರ ಮತ್ತು ಬಿಬಿಎಂಪಿ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ವಿಫ‌ಲವಾಗಿದೆ.

ಇದರ ಪರಿಣಾಮ ರಾಜ್ಯಕ್ಕೆ ಹಲವಾರು ಭಾಗ್ಯಗಳನ್ನು ನೀಡಿದ ಮುಖ್ಯಮಂತ್ರಿಗಳು ಬೆಂಗಳೂರಿನ ನಾಗರಿಕರಿಗೆ ‘ರಸ್ತೆ ಗುಂಡಿ ಭಾಗ್ಯ’ ದಯಪಾಲಿಸಿದಂತಾಗಿದೆ ಎಂದು ವ್ಯಂಗ್ಯವಾಡಿದರು. ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌, ಪಾಲಿಕೆ ಸದಸ್ಯ ಉಮೇಶ್‌ ಶೆಟ್ಟಿ, ವಿಧಾನ ಪರಿಷತ್‌ ಸದಸ್ಯ ವಿ.ಸೋಮಣ್ಣ ಮತ್ತಿತತರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next