ಬೆಂಗಳೂರು: ರಾಜ್ಯದಲ್ಲಿ ಉತ್ಪಾದನೆ ಆಗುತ್ತಿರುವ ಆಮ್ಲಜನಕವನ್ನು ರಾಜ್ಯದಲ್ಲೇ ಬಳಸಿಕೊಳ್ಳಲು ಅನುಮತಿನೀಡುವಂತೆ ಕೇಂದ್ರ ಸಚಿವರೊಂದಿಗೆ ದೂರವಾಣಿ ಮೂಲಕಸಮಾಲೋಚನೆ ನಡೆಸಲಾಗಿದೆ. ಶೀಘ್ರದಲ್ಲೇ ಈ ಬಗ್ಗೆಅನುಮತಿ ದೊರೆಯಲಿದೆ ಎಂದು ಕೈಗಾರಿಕಾ ಸಚಿವ ಜಗದೀಶ್‌ಶೆಟ್ಟರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ರಾಜ್ಯದಲ್ಲಿ ಆಕ್ಸಿಜನ್ ಪೂರೈಕೆ ಮತ್ತುಸರಬರಾಜು ಕುರಿತಂತೆ ನಡೆದ ಹಿರಿಯ ಅಧಿಕಾರಿಗಳೊಂದಿಗಿನಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ,ರಾಜ್ಯದಲ್ಲಿ ಆಮ್ಲಜನಕ ಉತ್ಪಾದನೆಯಪ್ರಮಾಣ ಹೆಚ್ಚಿಸಲಾಗಿದೆ. ಬಳ್ಳಾರಿಯಜಿಂದಾಲ್ ನಲ್ಲಿ ಈಗಾಗಲೇ ಉತ್ಪಾದನೆಹೆಚ್ಚಾಗಿದೆ. ಅಲ್ಲದೆ, ಕೇಂದ್ರ ಸರಕಾರಹೊರ ರಾಜ್ಯಗಳಿಂದ ಆಮ್ಲಜನಕ ಹಂಚಿಕೆಯನ್ನು ನೀಡಿದೆ.
ಆದರೆ,ದೂರದ ರಾಜ್ಯಗಳಿಂದ ಆಮ್ಲಜನಕವನ್ನುರಾಜ್ಯಕ್ಕೆ ತರಿಸಿಕೊಳ್ಳುವುದು ಬಹಳ ವಿಳಂಬವಾಗುತ್ತಿದೆ. ಈನಿಟ್ಟಿನಲ್ಲಿ ರಾಜ್ಯದಿಂದ ಬೇರೆ ರಾಜ್ಯಗಳಿಗೆ ಕಳುಹಿಸಲಾಗುತ್ತಿರುವಆಮ್ಲಜನಕದ ಪ್ರಮಾಣವನ್ನು ಕಡಿಮೆ ಮಾಡಿ ಅದನ್ನುರಾಜ್ಯದಲ್ಲೇ ಬಳಸಿಕೊಳ್ಳಲು ಅವಕಾಶ ನೀಡುವಂತೆ ಕೇಂದ್ರಸಚಿವ ಪಿಯೂಷ್ ಗೋಯೆಲ್ ಹಾಗೂ ಪ್ರಹ್ಲಾದ್ ಜೋಷಿಅವರೊಂದಿಗೆ ಸಮಾಲೋಚನೆ ನಡೆಸಿದ್ದೇನೆ. ಈ ಬಗ್ಗೆ ಕೇಂದ್ರಸಚಿವ ಪಿಯೂಷ್ ಗೋಯೆಲ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆಎಂದು ಹೇಳಿದರು.
ಜಿಲ್ಲೆಗಳ ಬೇಡಿಕೆಗೆ ತಕ್ಷಣ ಸ್ಪಂದಿಸಿ: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಆಮ್ಲಜನಕ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕು. ಈನಿಟ್ಟಿನಲ್ಲಿ ಆಯಾ ಜಿಲ್ಲೆಗಳಿಗೆ ಅಗತ್ಯವಿರುವಷ್ಟು ಆಮ್ಲಜನಕಪೂರೈಕೆ ಸರಬರಾಜಿನಲ್ಲಿ ತೊಂದರೆ ಆಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಂದಾಲ್ ಮುಖ್ಯಸ್ಥರೊಂದಿಗೆ ಮಾತನಾಡಿದ್ದು ಸ್ಟೀಲ್‌ಉತ್ಪಾ ದನೆ ಕಡಿಮೆಗೊಳಿಸಿ ಆಮ್ಲಜನಕ ಉತ್ಪಾದನೆ ಹೆಚ್ಚಿಸುವಂತೆಸೂಚನೆ ನೀಡಿದ್ದೇವೆ. ಈ ನಿಟ್ಟಿನಲ್ಲಿ ಅವರು ಕಾರ್ಯಪ್ರಾರಂಭಿಸಿದ್ದು ರಾಜ್ಯಕ್ಕೆ ಹೆಚ್ಚಿನ ಆಮ್ಲಜನಕ ದೊರೆಯಲಿದೆ ಎಂದುಹೇಳಿದರು.